ದೆಹಲಿ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಬಳಿ ಮೇಲ್ಛಾವಣಿ ಕುಸಿದಿರುವ ದೃಶ್ಯ
Credit: X/@MegamindMP
ನವದೆಹಲಿ: ಧಾರಾಕಾರ ಮಳೆ ಮತ್ತು ಗಾಳಿಯ ರಭಸದಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್–1ರ ಪ್ರವೇಶ ದ್ವಾರದ ಬಳಿ ಮೇಲ್ಛಾವಣಿ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ದೇಶದ ಅತಿದೊಡ್ಡ ಮತ್ತು ಜನನಿಬಿಡ ವಿಮಾನ ನಿಲ್ದಾಣವಾಗಿದೆ. ಇತ್ತೀಚೆಗೆ ಟರ್ಮಿನಲ್ –1 ಅನ್ನು ನವೀಕರಿಸಲಾಗಿತ್ತು.
ಟರ್ಮಿನಲ್–1ರ ಇತರ ಭಾಗಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ದೆಹಲಿ ಅಂತತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (DIAL) ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ, ಟರ್ಮಿನಲ್–1ರ ಮುಂಭಾಗದಲ್ಲಿರುವ ಮೇಲ್ಛಾವಣಿಯು ಭಾಗಶಃ ಕುಸಿದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಶನಿವಾರ ರಾತ್ರಿ 11:30ರಿಂದ ಭಾನುವಾರ ಬೆಳಿಗ್ಗೆ 4ಗಂಟೆಯ ಅವಧಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿದಿದ್ದು, 17 ಅಂತರರಾಷ್ಟ್ರೀಯ ವಿಮಾನಗಳು ಸೇರಿದಂತೆ 49 ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.