ADVERTISEMENT

India Pakistan Tensions: ದೆಹಲಿಯಲ್ಲಿ 138 ವಿಮಾನ ಹಾರಾಟ ರದ್ದು

ಪಿಟಿಐ
Published 9 ಮೇ 2025, 14:10 IST
Last Updated 9 ಮೇ 2025, 14:10 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಬಿಕ್ಕಟ್ಟಿನಿಂದಾಗಿ ಭದ್ರತೆ ದೃಷ್ಟಿಯಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ 138 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. 

‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ಬಳಿಕ ದೇಶದಾದ್ಯಂತ 27 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹಾಗಾಗಿ, ನಿಗದಿತ ವೇಳಾಪಟ್ಟಿಯಲ್ಲಿ ಸಂಚರಿಸಬೇಕಿದ್ದ ಹಲವು ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.

ದೆಹಲಿ ವಿಮಾನ ನಿಲ್ದಾಣದ ಕಾರ್ಯಾಚರಣೆಯು ಸಹಜ ಸ್ಥಿತಿಯಲ್ಲಿದೆ. ಆದರೂ, ಭದ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೆಹಲಿ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ ಲಿಮಿಟೆಡ್‌ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.