
ನವದೆಹಲಿ (): ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ನಿಂತಿದ್ದ ಶಟಲ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಆದರೆ, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು–ನೋವು ಸಂಭವಿಸಿಲ್ಲ.
ಟರ್ಮಿನಲ್‌ನಲ್ಲಿ ಬಸ್ ನಿಂತಿರುವಾಗಲೇ ಬೆಂಕಿ ಹೊತ್ತಿ ಕೊಂಡಿದೆ. ಆದರೆ, ಘಟನೆ ನಡೆದ ಸಂದರ್ಭದಲ್ಲಿ ಬಸ್‌ನಲ್ಲಿ ಯಾವುದೇ ಪ್ರಯಾಣಿಕರಾಗಲಿ, ಸರಕು–ಸರಂಜಾಮುಗಳಾಗಲಿ ಇರಲಿಲ್ಲ ಎಂದು ಉಪ ಪೊಲೀಸ್ ಆಯುಕ್ತರಾದ ವಿಚಿತ್ರ ವೀರ್ ಹೇಳಿದ್ದಾರೆ.
ಬೆಂಕಿ ಹೊತ್ತಿಕೊಂಡ ಕೆಲವೇ ನಿಮಿಷಗಳಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿ ಅದನ್ನು ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದಕ್ಕೆ ಕಾರಣವೇನು ಎಂದು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದೂ ವೀರ್ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.