ADVERTISEMENT

Delhi Assembly Election | ಫೆ. 5ರಂದು ಮತದಾನ; ಫೆ. 8ಕ್ಕೆ ಮತ ಎಣಿಕೆ: CEC

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜನವರಿ 2025, 9:24 IST
Last Updated 7 ಜನವರಿ 2025, 9:24 IST
<div class="paragraphs"><p>ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್</p></div>

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

   

ಪಿಟಿಐ

ನವದೆಹಲಿ: ದೆಹಲಿ ವಿಧಾನಸಭೆಗೆ ಕೇಂದ್ರ ಚುನಾವಣಾ ಆಯೋಗವು ಮಂಗಳವಾರ ಚುನಾವಣೆಗೆ ದಿನಾಂಕ ಘೋಷಿಸಿದೆ.

ADVERTISEMENT

2025ರ ಫೆಬ್ರುವರಿ 23ಕ್ಕೆ ವಿಧಾನಸಭೆಯ ಅವಧಿಯು ಕೊನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘ಮತದಾನಕ್ಕೆ ಫೆ. 5ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಫೆ. 8ಕ್ಕೆ ಎಣಿಕೆ ನಡೆಯಲಿದೆ’ ಎಂದು ತಿಳಿಸಿದರು.

‘ಒಟ್ಟು 70 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇದರಲ್ಲಿ 58 ಸಾಮಾನ್ಯ ಹಾಗೂ 12 ಮೀಸಲು ಕ್ಷೇತ್ರಗಳಿವೆ. ಇದಕ್ಕಾಗಿ 13,033 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಶೇ 100ರಷ್ಟು ವೆಬ್‌ಕಾಸ್ಟಿಂಗ್‌ ನಡೆಸಲಾಗುವುದು’ ಎಂದು ತಿಳಿಸಿದರು.

‘ದೆಹಲಿಯಲ್ಲಿ 83 ಲಕ್ಷ ಪುರುಷ ಹಾಗೂ 71 ಲಕ್ಷ ಮಹಿಳೆ ಸೇರಿ ಒಟ್ಟು 1.55 ಕೋಟಿ ಮತದಾರರು ಇದ್ದಾರೆ. 79 ಸಾವಿರ ಅಂಗವಿಕಲ ಮತದಾರರು ಹಾಗೂ 85 ವರ್ಷ ಮೇಲ್ಪಟ್ಟವರು ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದಾರೆ. ಇವರಿಗೆ ಮತಗಟ್ಟೆಗೆಯಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

‘ನಾಮಪತ್ರ ಸಲ್ಲಿಸಲು ಜ. 17 ಕೊನೆಯ ದಿನ. ಜ. 18ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜ. 20 ಕೊನೆಯ ದಿನವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಬುಧವಾರ (ವಾರದ ಮಧ್ಯದಲ್ಲಿ) ಮತದಾನಕ್ಕೆ ದಿನಾಂಕ ನಿಗದಿಪಡಿಸಲಾಗಿದೆ. ಈ ಪ್ರಯತ್ನವನ್ನು ಮಹಾರಾಷ್ಟ್ರದಲ್ಲಿ ನಡೆಸಿದ್ದು ಯಶಸ್ಸಿಯಾಗಿದೆ’ ರಾಜೀವ್ ಕುಮಾರ್ ವಿವರಿಸಿದರು.

ದೆಹಲಿಯೊಂದಿಗೆ ಉತ್ತರ ಪ್ರದೇಶದ ಮಿಲ್ಕಿಪುರ ಹಾಗೂ ತಮಿಳುನಾಡಿನ ಇರೋಡ್‌ ಕ್ಷೇತ್ರಗಳಿಗೆ ಉಪಚುನಾವಣೆಯೂ ಇದೇ ದಿನಾಂಕದಂದು ನಡೆಯಲಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.