ADVERTISEMENT

ನಮ್ಮ ಹೋರಾಟ ಬಿಜೆಪಿ ವಿರುದ್ಧವೇ ಹೊರತು ಇಂಡಿಯಾ ಬಣದವರೊಂದಿಗಲ್ಲ: ಕೇಜ್ರಿವಾಲ್

ಪಿಟಿಐ
Published 9 ಜನವರಿ 2025, 10:07 IST
Last Updated 9 ಜನವರಿ 2025, 10:07 IST
<div class="paragraphs"><p> ಅರವಿಂದ ಕೇಜ್ರಿವಾಲ್  </p></div>

ಅರವಿಂದ ಕೇಜ್ರಿವಾಲ್

   

–ಪಿಟಿಐ ಚಿತ್ರ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಹೋರಾಟ ಬಿಜೆಪಿ ವಿರುದ್ಧವೇ ಹೊರತು ‘ಇಂಡಿಯಾ’ ಮೈತ್ರಿಕೂಟದ ಜತೆಗಲ್ಲ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೆಹಲಿ ಚುನಾವಣೆ ಎಎಪಿ ಮತ್ತು ಬಿಜೆಪಿ ನಡುವಿನ ಹೋರಾಟವೇ ಹೊರತು ‘ಇಂಡಿಯಾ’ ಮೈತ್ರಿಕೂಟದ ಚುನಾವಣೆಯಲ್ಲ. ತೃಣಮೂಲ ಕಾಂಗ್ರೆಸ್ (ಟಿಎಂಸಿ), ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಶಿವಸೇನಾ (ಯುಬಿಟಿ) ನಮಗೆ ಬೆಂಬಲ ವ್ಯಕ್ತಪಡಿಸಿರುವುದು ಸಂತಸ ಮೂಡಿಸಿದೆ’ ಎಂದು ಹೇಳಿದ್ದಾರೆ.

‘ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ (ಎಎಪಿ) ಬೆಂಬಲ ನೀಡುವುದಾಗಿ ಘೋಷಿಸಿರುವ ‘ಇಂಡಿಯಾ’ ಬಣದ ನಾಯಕರಾದ ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್, ಉದ್ಧವ್ ಠಾಕ್ರೆಯವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಅವರ ಬೆಂಬಲ ಮತ್ತು ಆಶೀರ್ವಾದಕ್ಕೆ ನಾನು ಕೃತಜ್ಞನಾಗಿದ್ದೇನೆ. ನಿಮ್ಮ ಬೆಂಬಲದಿಂದ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ವಿಶ್ವಾಸವಿದೆ’ ಎಂದು ಅವರು ತಿಳಿಸಿದ್ದಾರೆ.

ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರುವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ. ದೆಹಲಿ ಚುನಾವಣೆಯಲ್ಲಿ ಈ ಬಾರಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.