ADVERTISEMENT

Delhi Polls: ಮಾದರಿ ನೀತಿ ಸಂಹಿತೆ ಉಲ್ಲಂಘನೆ; 1,000ಕ್ಕೂ ಹೆಚ್ಚು ಪ್ರಕರಣ ದಾಖಲು

ಪಿಟಿಐ
Published 3 ಫೆಬ್ರುವರಿ 2025, 11:20 IST
Last Updated 3 ಫೆಬ್ರುವರಿ 2025, 11:20 IST
<div class="paragraphs"><p>ಚುನಾವಣೆ</p></div>

ಚುನಾವಣೆ

   

(ಸಾಂದರ್ಭಿಕ ಚಿತ್ರ)

ನವದೆಹಲಿ: ಫೆಬ್ರುವರಿ 5ರಂದು ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜನವರಿ 7ರಿಂದ ಈವರೆಗೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯ 1,000ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ADVERTISEMENT

ಚುನಾವಣೆ ಹಿನ್ನೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನವರಿ 7ರಂದು ಮಾದರಿ ನೀತಿ ಸಂಹಿತೆ ಜಾರಿಗೊಳಿಸಲಾಗಿತ್ತು.

ಜನವರಿ 7ರಿಂದ ಫೆಬ್ರುವರಿ 2ರವರೆಗೆ ಅಬಕಾರಿ ಕಾಯ್ದೆ ಸೇರಿದಂತೆ ವಿವಿಧ ಕಾನೂನು ನಿಬಂಧನೆಗಳ ಅಡಿಯಲ್ಲಿ ಒಟ್ಟು 33,434 ಜನರನ್ನು ಬಂಧಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

‘ಚುನಾವಣೆಗೂ ಮುನ್ನ ಪೊಲೀಸರು ಗಡಿ ತಪಾಸಣಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಿದ್ದು, ಶಸ್ತ್ರಾಸ್ತ್ರ, ಮದ್ಯ, ಮಾದಕ ವಸ್ತುಗಳ ಕಳ್ಳಸಾಗಣೆ ಸೇರಿದಂತೆ ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ದೆಹಲಿ ಪೊಲೀಸರು ಮಾದರಿ ನೀತಿ ಸಂಹಿತೆ ಉಲ್ಲಂಘನೆಯ 1,049 ಪ್ರಕರಣಗಳನ್ನು ದಾಖಲಿಸಿದ್ದು, 462 ಬಂದೂಕುಗಳು, 510 ಸಿಡಿಮದ್ದುಗಳನ್ನು ವಶಪಡಿಸಿಕೊಂಡಿದ್ದಾರೆ. 482 ಜನರನ್ನು ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

1.8 ಲಕ್ಷ ಲೀಟರ್‌ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, 1,353 ಜನರನ್ನು ಬಂಧಿಸಲಾಗಿದೆ. ₹77.9 ಕೋಟಿ ಮೌಲ್ಯದ 196.60 ಕೆ.ಜಿ ಮಾದಕ ವಸ್ತುಗಳು ಮತ್ತು 1,200ಕ್ಕೂ ಹೆಚ್ಚು ನಿಷೇಧಿತ ಚುಚ್ಚು ಮದ್ದುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆ.8ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.