ADVERTISEMENT

ಸಿಎಂ ಸ್ಥಾನಕ್ಕೆ ಆತಿಶಿ ರಾಜೀನಾಮೆ; ವಿಧಾನಸಭೆ ವಿಸರ್ಜಿಸಿದ ಲೆಫ್ಟಿನೆಂಟ್ ಗವರ್ನರ್

ಪಿಟಿಐ
Published 9 ಫೆಬ್ರುವರಿ 2025, 7:36 IST
Last Updated 9 ಫೆಬ್ರುವರಿ 2025, 7:36 IST
<div class="paragraphs"><p>ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ  ರಾಜೀನಾಮೆ ಸಲ್ಲಿಸಿದ&nbsp;ಆತಿಶಿ</p></div>

ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಆತಿಶಿ

   

ಪಿಟಿಐ ಚಿತ್ರ

ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ಅವರು ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಲೆಫ್ಟಿನೆಂಟ್ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ದೆಹಲಿ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.

ADVERTISEMENT

70 ಸದಸ್ಯ ಬಲ ಹೊಂದಿರುವ ರಾಷ್ಟ್ರ ರಾಜಧಾನಿಯ ವಿಧಾನಸಭಾ ಚುನಾವಣೆಯು ಫೆಬ್ರುವರಿ 5ರಂದು ನಡೆದಿತ್ತು. ಶನಿವಾರ (ಫೆ.8ರಂದು) ಫಲಿತಾಂಶ ಪ್ರಕಟವಾಗಿದೆ.

2015 ಹಾಗೂ 2020ರಲ್ಲಿ ಭಾರಿ ಬಹುಮತದೊಂದಿಗೆ ಅಧಿಕಾರ ನಡೆಸಿದ್ದ ಎಎಪಿ ಕೇವಲ 22 ಸ್ಥಾನಗಳಿಗೆ ಕುಸಿದು ಮುಖಭಂಗ ಅನುಭವಿಸಿದೆ. 48 ರಲ್ಲಿ ಗೆದ್ದಿರುವ ಬಿಜೆಪಿ, ಭಾರಿ ಬಹುಮತದೊಂದಿಗೆ ಸರ್ಕಾರ ರಚನೆಗೆ ಸಜ್ಜಾಗಿದೆ.

ಆತಿಶಿ ಅವರು ಕಲ್ಕಾಜಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಹೀಗಾಗಿ, ಆತಿಶಿ ಅವರು ಇಂದು (ಭಾನುವಾರ) 'ರಾಜ ನಿವಾಸ'ಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸ ಮುಗಿಸಿ, ಮುಂದಿನ ವಾರ ವಾಪಸ್‌ ಆದ ಬಳಿಕ ಬಿಜೆಪಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಫೆಬ್ರುವರಿ 10ರಂದು ಫ್ರಾನ್ಸ್‌ಗೆ ಭೇಟಿ ನೀಡಲಿರುವ ಮೋದಿ, ಫೆಬ್ರುವರಿ 12ರಿಂದ ಎರಡು ದಿನ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.