ADVERTISEMENT

ದೆಹಲಿ ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭ

ಐಎಎನ್ಎಸ್
Published 16 ಜನವರಿ 2023, 5:29 IST
Last Updated 16 ಜನವರಿ 2023, 5:29 IST
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್   

ಹೊಸದಿಲ್ಲಿ: ದೆಹಲಿ ವಿಧಾನಸಭೆ ಅಧಿವೇಶನವು ಇಂದಿನಿಂದ ಪ್ರಾರಂಭವಾಗಲಿದೆ. ಇತ್ತೀಚೆಗೆ ನಡೆದ ಮೇಯರ್ ಚುನಾವಣೆಯ ವಿಷಯಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

7ನೇ ಅಧಿವೇಶನವು ಇಂದು ಬೆಳಗ್ಗೆ 11ರಿಂದ ಪ್ರಾರಂಭವಾಗಿ ಜನವರಿ18ರ ವರೆಗೆ ಮುಂದುವರೆಯಲಿದೆ. ಅಗತ್ಯಬಿದ್ದರೆ ಸದನದ ಅವಧಿಯನ್ನು ವಿಸ್ತರಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಖಾಮುಖಿಯಾದ ನಂತರ ಮೊದಲ ಬಾರಿಗೆ ಅಧಿವೇಶನವನ್ನು ನಡೆಸಲಾಗುತ್ತಿದೆ.

ADVERTISEMENT

ಡಿ.7ರಂದು ನಡೆದ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿಪಕ್ಷ 107 ಸ್ಥಾನ ಗೆದ್ದಿತ್ತು. ಬಿಜೆಪಿ 104 ಸ್ಥಾನದಲ್ಲಿ ಜಯ ಗಳಿಸಿತ್ತು. ಎಎಪಿ ಗೆಲುವಿನ ಹೊರತಾಗಿಯೂ ತಮ್ಮ ಪಕ್ಷದವರೇ ಮೇಯರ್ ಆಗಲಿದ್ದಾರೆ ಎಂಬ ಆತ್ಮ ವಿಶ್ವಾಸವನ್ನು ಬಿಜೆಪಿ ಕೆಲ ನಾಯಕರು ವ್ಯಕ್ತಪಡಿಸಿದ್ದರು.

ಪಾಲಿಕೆ ಚುನಾವಣೆಯ ಕಚ್ಚಾಟದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.