ADVERTISEMENT

Delhi Blast | ಎಲ್ಲಾ ಕಾಶ್ಮೀರಿಗಳನ್ನು ಶಂಕಿತರಂತೆ ನೋಡಲಾಗುತ್ತಿದೆ: ಒಮರ್

ಪಿಟಿಐ
Published 19 ನವೆಂಬರ್ 2025, 11:12 IST
Last Updated 19 ನವೆಂಬರ್ 2025, 11:12 IST
<div class="paragraphs"><p>ಒಮರ್ ಅಬ್ದುಲ್ಲಾ</p></div>

ಒಮರ್ ಅಬ್ದುಲ್ಲಾ

   

ಪಿಟಿಐ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜನರನ್ನು ಶಂಕಿತರಂತೆ ನೋಡಲಾಗುತ್ತಿದೆ. ಹಾಗಾಗಿ ಕೇಂದ್ರಾಡಳಿತ ಪ್ರದೇಶದಿಂದ ಹೊರಗೆ ಹೋಗಲು ಜನ ಭಯಪಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಹೊರಗೆ ಕಳುಹಿಸಲು ಇಷ್ಟಪಡುತಿಲ್ಲ. ಏಕೆಂದರೆ ಎಲ್ಲಾ ಕಡೆಯಿಂದಲೂ ನಮ್ಮನ್ನು ಅನುಮಾನಾಸ್ಪದ ದೃಷ್ಟಿಯಿಂದ ನೋಡಲಾಗುತ್ತಿದೆ. ಕೆಲವರು ಮಾಡಿದ ತಪ್ಪಿಗೆ ಎಲ್ಲರನ್ನೂ ದೂಷಿಸಲಾಗುತ್ತಿದೆ. ಇದರಿಂದಾಗಿ ನಾವು ಹೊರಗೆ ಓಡಾಡಲು ಕಷ್ಟವಾಗುತ್ತಿದೆ ಎಂದಿದ್ದಾರೆ.

ದೆಹಲಿಯಲ್ಲಿ ನಡೆದ ಘಟನೆಗೆ (ಕಾರು ಸ್ಫೋಟ) ಕೆಲವೇ ಮಂದಿ ಕಾರಣ. ಆದರೆ ಅದಕ್ಕೆ ನಾವೆಲ್ಲರೂ ಕಾರಣರು ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ನವೆಂಬರ್ 10 ರಂದು ದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟದಲ್ಲಿ 15 ಜನ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ದೆಹಲಿ ಪೊಲೀಸ್ ವಿಶೇಷ ಘಟಕ ಹಾಗೂ ಎನ್‌ಐಎ ಹೆಚ್ಚಿನ ತನಿಖೆ ನಡೆಸುತ್ತಿವೆ. ಹೆಚ್ಚಿನ ಭದ್ರತಾ ಕ್ರಮಗಳ ಭಾಗವಾಗಿ ಫರಿದಾಬಾದ್‌ವೊಂದರಲ್ಲೇ ಜಮ್ಮು ಮತ್ತು ಕಾಶ್ಮೀರದ 500ಕ್ಕೂ ಹೆಚ್ಚು ಜನರನ್ನು ಪೊಲೀಸರು ತಪಾಸಣೆಗೆ ಒಳಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.