
ಸ್ಫೋಟದ ಸ್ಥಳದಲ್ಲಿ ದೆಹಲಿ ಪೊಲೀಸರು ಪರಿಶೀಲನೆ ನಡೆಸುತ್ತಿರುವುದು
ನವದೆಹಲಿ: ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನ ಮಾಲೀಕನನ್ನು ವಶಕ್ಕೆ ಪಡೆಯಲಾಗಿದೆ ಎಂಬುದಾಗಿ ಮೂಲಗಳು ತಿಳಿಸಿವೆ.
ಮಾಲೀಕನ ಕುರಿತ ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.
ಸ್ಫೋಟಗೊಂಡ ಹುಂಡೈ ಐ20 ಹ್ಯುಂಡೈ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು. ಇದೊಂದು ಆತ್ಮಾಹುತಿ ಬಾಂಬ್ ದಾಳಿಯೇ ಎಂಬ ವಿಚಾರವಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸ್ಫೋಟದ ಪರಿಣಾಮ 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.
ರಾಷ್ಟ್ರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.