ಪ್ರಾತಿನಿಧಿಕ ಚಿತ್ರ
ಗುರುಗ್ರಾಮ: ದೆಹಲಿ ಕೆಂಪುಕೋಟೆ ಬಳಿ ಸ್ಫೋಟಗೊಂಡ ಕಾರಿನ ಮೊದಲ ಮಾಲೀಕರಿಗೆ ಬಾಡಿಗೆ ಮನೆ ನೀಡಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಹರಿಯಾಣದಲ್ಲಿ ನೋಂದಣಿಯಾಗಿರುವ ಕಾರಿನ ಮೊದಲ ಮಾಲೀಕ ಮೊಹಮ್ಮದ್ ಸಲ್ಮಾನ್ ಅವರು 2016ರಿಂದ 2020ರವರೆಗೆ ಗುರುಗ್ರಾಮದ ಬಾಡಿಗೆ ಮನೆಯೊಂದರಲ್ಲಿದ್ದರು. ಆ ಮನೆಯ ಮಾಲೀಕ ದಿನೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ.
‘ನಮ್ಮ ಶಾಂತಿನಗರದ ಮನೆಯಲ್ಲಿ ಸಲ್ಮಾನ್, ಅವರ ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ನಾಲ್ಕು ವರ್ಷ ವಾಸಿಸಿದ್ದರು. ಬಳಿಕ ಗುರುಗ್ರಾಮದಲ್ಲಿನ ತಮ್ಮ ಸ್ವಂತ ಫ್ಲ್ಯಾಟ್‌ಗೆ ಸ್ಥಳಾಂತರಗೊಂಡಿದ್ದರು’ ಎಂದು ದಿನೇಶ್ ಕುಟುಂಬಸ್ಥರು ತಿಳಿಸಿದ್ದಾರೆ.
ಸಲ್ಮಾನ್ ಅವರು ತಮ್ಮ ಕಾರನ್ನು ದೆಹಲಿಯ ಓಕ್ಲಾ ನಿವಾಸಿ ದೇವೇಂದ್ರ ಅವರಿಗೆ ಮಾರಾಟ ಮಾಡಿದ್ದರು. ದೇವೇಂದ್ರ ಅವರಿಂದ ಅದೇ ಕಾರನ್ನು ಖರೀದಿಸಿದ್ದ ಅಂಬಾಲದ ನಿವಾಸಿಯೊಬ್ಬರು ಪುಲ್ವಾಮದ ತಾರೀಕ್ ಎಂಬವರಿಗೆ ಮಾರಾಟ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.