
ನವದೆಹಲಿ: ಇಲ್ಲಿನ ಕೆಂಪುಕೋಟೆ ಮೆಟ್ರೊ ರೈಲು ನಿಲ್ದಾಣದ ಸಮೀಪ ಸೋಮವಾರ ಸಂಭವಿಸಿದ್ದ ಕಾರಿನಲ್ಲಿ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ಇತರ ನ್ಯಾಯಾಧೀಶರು ಮಂಗಳವಾರ ಸಾಂತ್ವನ ಹೇಳಿದ್ದಾರೆ.
‘ಕಾರು ಸ್ಫೋಟವು ಹೇಡಿತನದ ಕೃತ್ಯ. ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾವು ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇವೆ’ ಎಂದು ಸಿಜೆಐ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
‘ಜೀವಹಾನಿಯ ನೋವನ್ನು ಯಾವುದೇ ಪದಗಳು ಕಡಿಮೆ ಮಾಡಲು ಸಾಧ್ಯವಿಲ್ಲ. ಆದರೆ, ಈ ದುಃಖದ ಸಮಯದಲ್ಲಿ ರಾಷ್ಟ್ರದ ಸಾಮೂಹಿಕ ಸಹಾನುಭೂತಿ ಮತ್ತು ಒಗ್ಗಟ್ಟು ಸ್ವಲ್ಪ ಸಾಂತ್ವನ ನೀಡುತ್ತದೆ. ಈ ಕ್ಷಣದಲ್ಲಿ ನಾವು ದುಃಖಿತರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.