
ನವದೆಹಲಿ: ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಕಾರನ್ನು ಬಳಸಿಕೊಳ್ಳಲಾಗಿತ್ತೇ ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಈ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪು ಫೋರ್ಡ್ ಇಕೊಸ್ಪೋರ್ಟ್ ಕಾರನ್ನು ಬಳಸಿಕೊಳ್ಳಲಾಗಿತ್ತು ಎಂದು ಪೊಲೀಸರು ಶಂಕಿಸಿದ್ದು, ಈ ಕಾರನ್ನು ಪತ್ತೆ ಹಚ್ಚಲು ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯ ಎಲ್ಲಾ ಪೊಲೀಸ್ ಠಾಣೆಗಳು, ಚೆಕ್ ಪೋಸ್ಟ್‌ಗಳಲ್ಲಿ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಫೋಟದಲ್ಲಿ ಬಳಸಲಾದ ಹುಂಡೈ ಐ20 ಕಾರಿನ ಜತೆಗೆ ಶಂಕಿತರು ಮತ್ತೊಂದು ಕೆಂಪು ಬಣ್ಣದ ಫೋರ್ಡ್ ಇಕೊಸ್ಪೋರ್ಟ್ ಕಾರನ್ನು ಹೊಂದಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಹೀಗಾಗಿ ಫೋರ್ಡ್ ಇಕೊಸ್ಪೋರ್ಟ್ ಕಾರು ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಐದು ಪೊಲೀಸರ ತಂಡ ಕಾರು ಪತ್ತೆಗಾಗಿ ಕಾರ್ಯಚರಣೆ ನಡೆಸುತ್ತಿದ್ದು, ನೆರೆಯ ಉತ್ತರ ಪ್ರದೇಶ ಮತ್ತು ಹರಿಯಾಣದಲ್ಲಿಯೂ ಹುಡುಕಾಟಕ್ಕಾಗಿ ಅಲ್ಲಿನ ಪೊಲೀಸರ ಸಹಕಾರ ಕೋರಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.