
ಭೂತಾನ್‌ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಲ್ಲಿನ ಪ್ರಧಾನಿ ಶೆರಿಂಗ್ ತೋಬ್‌ಗಯಾ ಅವರು ಸ್ವಾಗತಿಸಿದರು
ಪಿಟಿಐ ಚಿತ್ರ
ಥಿಂಪು: ‘ದೆಹಲಿ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಬಾಂಬ್ ಸ್ಫೋಟ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, 'ನಮ್ಮ ತನಿಖಾ ಸಂಸ್ಥೆಗಳು ಈ ಪ್ರಕರಣದ ಆಳಕ್ಕಿಳಿದು, ಇದರ ಹಿಂದಿರುವವರನ್ನು ಪತ್ತೆ ಮಾಡಲಿವೆ’ ಎಂದಿದ್ದಾರೆ.
ಭೂತಾನ್ ಪ್ರವಾಸದಲ್ಲಿರುವ ಅವರು ಘಟನೆ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
‘ದೆಹಲಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಘಟನೆ ಪ್ರತಿಯೊಬ್ಬರಿಗೂ ಆಘಾತವನ್ನುಂಟು ಮಾಡಿದೆ. ಇದಕ್ಕೆ ಕಾರಣರಾದ ಪ್ರತಿಯೊಬ್ಬರನ್ನೂ ಕಾನೂನು ಎದುರು ನಿಲ್ಲಿಸಲಾಗುವುದು’ ಎಂದಿದ್ದಾರೆ.
‘ಸ್ಫೋಟದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರ ಕುಟುಂಬದವರೊಂದಿಗೆ ಇಡೀ ದೇಶವೇ ನಿಲ್ಲಲಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.