
ನವದೆಹಲಿ: ರಾಷ್ಡ್ರ ರಾಜಧಾನಿ ದೆಹಲಿಯ 2 ಸಿಆರ್‌ಪಿಎಫ್ ಶಾಲೆಗಳು ಸೇರಿದಂತೆ 4 ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸರಿಗೆ ಕರೆ ಮಾಡಿ ಪ್ರಶಾಂತ್ ವಿಹಾರ್ ಮತ್ತು ದ್ವಾರಕಾದಲ್ಲಿರುವ ಸಿಆರ್‌ಪಿಎಫ್ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ದೆಹಲಿಯ 4 ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆಯ ಇ–ಮೇಲ್ ಬಂದಿದೆ. ಸ್ಥಳೀಯ ಪೊಲೀಸರು, ಬಾಂಬ್ ನಿಷ್ಕ್ರಿಯ ದಳಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಯಾವುದೇ ಅನುಮಾನ್ಪಾದ ವಸ್ತುಗಳು ಕಂಡು ಬಂದಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಶೋಧ ಕಾರ್ಯಾಚರಣೆಯ ವೇಳೆ ಶಾಲೆ ಮತ್ತು ನ್ಯಾಯಾಲಯದಲ್ಲಿದ್ದ ಜನರನ್ನು ಸ್ಥಳಾಂತರಿಸಲಾಗಿತ್ತು ಎಂದು ಪೊಲೀಸರರು ತಿಳಿಸಿದ್ದಾರೆ.
ಬೆದರಿಕೆ ಬಂದ ಕೂಡಲೇ ಕರೆ ಮಾಡಿದ್ದ ವ್ಯಕ್ತಿಯ ಫೋನ್ ಸ್ವಿಚ್ ಆಫ್ ಆಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.