ADVERTISEMENT

ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ತುರ್ತು ಭೂಸ್ಪರ್ಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಸೆಪ್ಟೆಂಬರ್ 2022, 2:43 IST
Last Updated 27 ಸೆಪ್ಟೆಂಬರ್ 2022, 2:43 IST
ಏರ್ ಇಂಡಿಯಾ ವಿಮಾನ
ಏರ್ ಇಂಡಿಯಾ ವಿಮಾನ   

ಕಣ್ಣೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಏರ್‌ ಇಂಡಿಯಾ ವಿಮಾನ ಟೇಕಾಪ್‌ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನತುರ್ತು ಭೂಸ್ಪರ್ಶ ಮಾಡಿದೆ.

135 ಪ್ರಯಾಣಿಕರಿದ್ದಟೇಕಾಫ್‌ ಆದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ಇಲ್ಲಿನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಏರ್‌ ಇಂಡಿಯಾ ಅಧಿಕಾರಿಗಳು ಹೇಳಿದ್ದಾರೆ.

ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಕಾರಣ,ತಪಾಸಣೆ ಮತ್ತು ನಿರ್ವಹಣೆಗಾಗಿ ವಿಮಾನವನ್ನು ಇಳಿಸಲಾಯಿತು.ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಹಾಗೂ ವಿಮಾನಕ್ಕೂ ಯಾವುದೇ ಹಾನಿಯಾಗಿಲ್ಲ ಎಂದುಏರ್ ಇಂಡಿಯಾದ ವಕ್ತಾರರು ತಿಳಿಸಿದ್ದಾರೆ.

ADVERTISEMENT

ವಿದೇಶಗಳಿಗೆ ತೆರಳುವ ಪ್ರಯಾಣಿಕರಿಗೆ ಬೇರೆ ವಿಮಾನಗಳಲ್ಲಿ ತೆರಳಲು ಅವಕಾಶ ಕಲ್ಪಿಸಲಾಯಿತು. ದೆಹಲಿಗೆ ತೆರಳಬೇಕಿದ್ದ ಪ್ರಯಾಣಿಕರನ್ನು ಇಲ್ಲಿನ ಹೊಟೇಲ್‌ಗಳಲ್ಲಿ ಇರಿಸಲಾಗಿದ್ದು ಮಂಗಳವಾರ ಅವರ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.