ADVERTISEMENT

ಕೊಂಕಣಿ ಅಕಾಡೆಮಿ ಸ್ಥಾಪಿಸಲು ಕೇಜ್ರಿವಾಲ್‌ ಸಂಪುಟ ಅನುಮೋದನೆ

ಪಿಟಿಐ
Published 8 ಜನವರಿ 2021, 9:42 IST
Last Updated 8 ಜನವರಿ 2021, 9:42 IST
ಅರವಿಂದ ಕೇಜ್ರಿವಾಲ್‌
ಅರವಿಂದ ಕೇಜ್ರಿವಾಲ್‌   

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊಂಕಣಿ ಅಕಾಡೆಮಿ ಸ್ಥಾಪಿಸಲು ದೆಹಲಿ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

‘ಕೊಂಕಣಿ ಭಾಷೆಯನ್ನು ಇಷ್ಟಪಡುವ ಮತ್ತು ಮಾತನಾಡುವ ಎಲ್ಲರಿಗೂ ಅಭಿನಂದನೆಗಳು. ಕೊಂಕಣಿ ಭಾಷೆಯನ್ನು ಪ್ರೋತ್ಸಾಹಿಸುವ ಸಲುವಾಗಿ ದೆಹಲಿಯಲ್ಲಿ ಕೊಂಕಣಿ ಅಕಾಡೆಮಿಯನ್ನು ಸ್ಥಾಪಿಸಲು ದೆಹಲಿ ಸಚಿವ ಸಂಪುಟ ಅನುಮೋದನೆ ನೀಡಿದೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಟ್ವೀಟ್‌ ಮಾಡಿದ್ದಾರೆ.

ಕೊಂಕಣಿ ಇಂಡೊ-ಆರ್ಯನ್ ಭಾಷೆಯಾಗಿದ್ದು, ಪಶ್ಚಿಮ ಕರಾವಳಿ ಪ್ರದೇಶದಲ್ಲಿ ಹೆಚ್ಚಾಗಿ ಬಳಕೆಯಲ್ಲಿದೆ. ಸಂವಿಧಾನದ 8ನೇಪರಿಚ್ಛೇದದಲ್ಲಿ ಪ್ರಸ್ತಾಪಿಸಿರುವ 22 ಭಾಷೆಗಳಲ್ಲಿ ಕೊಂಕಣಿಯೂ ಒಂದು. ಇದು ಗೋವಾದ ಅಧಿಕೃತ ಭಾಷೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.