ADVERTISEMENT

ಅಬಕಾರಿ ನೀತಿ ಹಗರಣ: ಇ.ಡಿ ವಿಚಾರಣೆಗೆ ಮೂರನೇ ಬಾರಿಯೂ ಕೇಜ್ರಿವಾಲ್ ಗೈರು

ಪಿಟಿಐ
Published 3 ಜನವರಿ 2024, 4:30 IST
Last Updated 3 ಜನವರಿ 2024, 4:30 IST
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್   

ನವದೆಹಲಿ: ಅಬಕಾರಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಮೂರನೇ ನೋಟಿಸ್‌ಗೆ ಲಿಖಿತ ಉತ್ತರ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಚಾರಣೆಗೆ ಗೈರು ಹಾಜರಾಗಿದ್ದಾರೆ ಎಂದು ಆಮ್‌ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.

ತನಿಖಾ ಸಂಸ್ಥೆಯೊಂದಿಗೆ ಅರವಿಂದ ಕೇಜ್ರಿವಾಲ್ ಅವರು ಸಹಕರಿಸಲು ಸಿದ್ಧವಿರುವುದಾಗಿ ಹೇಳಿರುವ ಪಕ್ಷವು, ಅವರನ್ನು ಬಂಧಿಸುವ ಉದ್ದೇಶದಿಂದ ನೋಟಿಸ್‌ ನೀಡಿದ್ದಾರೆ ಎಂದು ಆರೋಪಿಸಿದೆ.

‘ಚುನಾವಣೆಗೂ ಮುನ್ನ ಯಾಕೆ ನೋಟಿಸ್‌ ಕಳಿಸಲಾಗಿದೆ? ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದಂತೆ ತಡೆಯುವ ಉದ್ದೇಶದಿಂದ ಕೇಜ್ರಿವಾಲ್ ಅವರಿಗೆ ನೋಟಿಸ್ ಕಳಿಸಲಾಗುತ್ತಿದೆ’ ಎಂದು ಪಕ್ಷ ಹೇಳಿದೆ.

ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಇಂದು (ಡಿ.3) ವಿಚಾರಣೆಗೆ ಹಾಜರಾಗಬೇಕು ಎಂದು ಇ.ಡಿ, ಕೇಜ್ರಿವಾಲ್ ಅವರಿಗೆ ನೋಟಿಸ್‌ ನೀಡಿತ್ತು.

ಇದೇ ಪ್ರಕರಣ ಸಂಬಂಧ ಕೇಜ್ರಿವಾಲ್ ಅವರಿಗೆ ಮೂರು ನೋಟಿಸ್‌ ನೀಡಲಾಗಿದ್ದು, ಒಮ್ಮೆಯೂ ಅವರು ವಿಚಾರಣೆಗೆ ಹಾಜರಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.