ADVERTISEMENT

ಕೋವಿಡ್‌ ನಿಯಂತ್ರಣದ ಬಗ್ಗೆ ಚರ್ಚೆ; ಸರ್ವಪಕ್ಷ ಸಭೆ ಕರೆದ ದೆಹಲಿ ಸಿಎಂ ಕೇಜ್ರಿವಾಲ್

ಏಜೆನ್ಸೀಸ್
Published 19 ನವೆಂಬರ್ 2020, 4:22 IST
Last Updated 19 ನವೆಂಬರ್ 2020, 4:22 IST
ಅರವಿಂದ್ ಕೇಜ್ರಿವಾಲ್‌
ಅರವಿಂದ್ ಕೇಜ್ರಿವಾಲ್‌   

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕಣಗಳನ್ನು ನಿಯಂತ್ರಿಸುವ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರು ಗುರುವಾರ ಸರ್ವಪಕ್ಷ ಸಭೆ ಕರೆದಿದ್ದಾರೆ.

ಕಳೆದ ಹಲವು ದಿನಗಳಿಂದ ಕೊರೊನಾ ವೈರಸ್‌ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗಿದ್ದು, ಮದುವೆ ಮತ್ತಿತರ ಸಮಾರಂಭಗಳಿಗೆ 200 ಮಂದಿ ಅತಿಥಿಗಳಿಗೆ ಸೇರಲು ಅವಕಾಶ ನೀಡಿದ್ದ ಆದೇಶವನ್ನು ಹಿಂಪಡೆಯಲು ದೆಹಲಿ ಸರ್ಕಾರ ನಿರ್ಧರಿಸಿತ್ತು. ಜೊತೆಗೆ, ಕೊರೊನಾ ಹಾಟ್‌ಸ್ಪಾಟ್‌ಗಳಾಗಿ ಪರಿವರ್ತನೆಯಾಗಬಹುದಾದ ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲು ಅಧಿಕಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಿದೆ.

ದೀಪಾವಳಿ ಹಬ್ಬದ ಸಮಯದಲ್ಲಿ ರಾಜಧಾನಿಯ ಮಾರುಕಟ್ಟೆ ಸೇರಿದಂತೆ ಹಲವು ಕಡೆಗಳಲ್ಲಿ ಜನರು ಮಾಸ್ಕ್‌ ಧರಿಸದೇ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೇ ಓಡಾಡುತ್ತಿದ್ದದು ಕಂಡುಬಂದಿತ್ತು. ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿರುವ ಇಂಥ ಕಡೆಗಳಲ್ಲಿ ಕೊರೊನಾ ಸೋಂಕು ಹೆಚ್ಚುವ ಸಾಧ್ಯತೆ ಇದೆ. ಹೀಗಾಗಿ ಮಾರುಕಟ್ಟೆ ಪ್ರದೇಶಗಳ್ಲಲಿ ಲಾಕ್‌ಡೌನ್ ಜಾರಿಗೊಳಿಸಬೇಕಾದ್ದು ಅನಿವಾರ್ಯ ಎಂದು ಕೇಜ್ರಿವಾಲ್‌ ಅಭಿಪ್ರಾಯಪಟ್ಟಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.