ADVERTISEMENT

ಹಾಥರಸ್‌ ಪ್ರಕರಣ: ಯುಪಿ ಸರ್ಕಾರದ ವಿರುದ್ಧ ಹರಿಹಾಯ್ದ ಅರವಿಂದ್‌ ಕೇಜ್ರಿವಾಲ್‌

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 10:20 IST
Last Updated 2 ಅಕ್ಟೋಬರ್ 2020, 10:20 IST
ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌
ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌   

ನವದೆಹಲಿ: ಅಧಿಕಾರದಲ್ಲಿರುವ ಜನರು ಈ ದೇಶದ ಸೇವಕರೇ ಹೊರತು ಮಾಲೀಕರಲ್ಲ ಎಂಬುದನ್ನು ಮರೆಯಬಾರದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ.

ಉತ್ತರ ಪ್ರದೇಶದ ಹಾಥರಸ್ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು,'ಘಟನೆಯು ತುಂಬಾ ನೋವಿನಿಂದ ಕೂಡಿದೆ. ಸಂತ್ರಸ್ತೆಯ ಕುಟುಂಬದೊಂದಿಗೆ ಸರ್ಕಾರ ನಡೆದುಕೊಂಡಿರುವ ರೀತಿ ಸರಿಯಲ್ಲ. ನಾವು ಪ್ರಜಾಪ್ರಭುತ್ವದಲ್ಲಿ ಜೀವಿಸುತ್ತಿದ್ದೇವೆ. ಅಧಿಕಾರಿದಲ್ಲಿರುವ ಜನರು ಈ ದೇಶದ ಸೇವಕರೇ ಹೊರತು ಮಾಲೀಕರಲ್ಲ ಎಂಬುದನ್ನು ಮರೆಯಬಾರದು' ಎಂದು ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ. ಈ ಮೂಲಕ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹಾಥರಸ್‌ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು. ಮೂಳೆ ಮುರಿತ ಮತ್ತು ನಾಲಿಗೆಯು ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು.

ADVERTISEMENT

ಮೃತಪಟ್ಟ ಯುವತಿಯ ಅಂತ್ಯಕ್ರಿಯೆಯನ್ನು ಉತ್ತರ ಪ್ರದೇಶ ಪೊಲೀಸರುನಡುರಾತ್ರಿಯಲ್ಲೇ ಮಾಡಿ ಮುಗಿಸಿದ್ದರು. ಅಂತ್ಯಕ್ರಿಯೆಗೆ ತೆರಳಲು ತಮಗೂ ಅವಕಾಶ ನೀಡಿರಲಿಲ್ಲ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದರು. ಈ ಘಟನೆಯು ದೇಶದಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.