ADVERTISEMENT

ಉಗ್ರರ ಮೇಲೆ ದಾಳಿ: ಉಪವಾಸ ಸತ್ಯಾಗ್ರಹ ಮುಂದೂಡಿದ ಕೇಜ್ರಿವಾಲ್‌

ಪಿಟಿಐ
Published 26 ಫೆಬ್ರುವರಿ 2019, 19:22 IST
Last Updated 26 ಫೆಬ್ರುವರಿ 2019, 19:22 IST
   

ನವದೆಹಲಿ: ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಮಾರ್ಚ್‌ 1ರಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದೂಡಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಟ್ವೀಟ್‌ ಮಾಡಿದ್ದಾರೆ.

ಭಾರತ–ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಕಾರಣ ಈ ತೀರ್ಮಾನ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ದೇಶದಲ್ಲಿ ಆತ್ಮಾಹುತಿ ದಾಳಿ ನಡೆಸಲು ಸಂಚು ರೂಪಿಸಿದ್ದ ಜೈಷ್‌ –ಎ–ಮೊಹಮದ್‌ (ಜೆಇಎಂ) ಉಗ್ರರ ಶಿಬಿರಗಳ ಮೇಲೆ ಯೋಧರು ಮಂಗಳವಾರ ಬೆಳಗಿನ ಜಾವ ದಾಳಿ ನಡೆಸಿದ್ದು, ಉಪವಾಸ ಸತ್ಯಾಗ್ರಹ ನಡೆಸಲು ಇದು ಸರಿಯಾದ ಸಮಯ ಅಲ್ಲ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.