ADVERTISEMENT

ಪುನೀತ್ ಪುಣ್ಯಸ್ಮರಣೆ: ಅಪ್ಪು ನೆನೆದು ಟ್ವೀಟ್ ಮಾಡಿದ ದೆಹಲಿ ಸಿಎಂ ಕೇಜ್ರಿವಾಲ್‌

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2022, 10:46 IST
Last Updated 29 ಅಕ್ಟೋಬರ್ 2022, 10:46 IST
ಕೇಜ್ರಿವಾಲ್‌, ಪುನೀತ್
ಕೇಜ್ರಿವಾಲ್‌, ಪುನೀತ್   

ಬೆಂಗಳೂರು: ಪವರ್‌ಸ್ಟಾರ್‌ಪುನೀತ್ ರಾಜ್‌ಕುಮಾರ್‌ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಎಎಪಿ ಪಕ್ಷದ ನಾಯಕ ದೆಹಲಿ ಮುಖ್ಯಮಂತ್ರಿ ಅರವಿಂದ್‌ಕೇಜ್ರಿವಾಲ್ ‘ಅಪ್ಪು‘ ನೆನೆದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ, ಈ ದಿನ ಅವರನ್ನು ನಾನು ಗಾಢವಾಗಿ ನೆನಪಿಸಿಕೊಳ್ಳುತ್ತಿದ್ದೇನೆ ಎಂದು ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದಾರೆ.

ಚಲನಚಿತ್ರಗಳು, ಹಾಡುಗಳು, ಸಾಮಾಜಿಕ ಕಾರ್ಯಗಳ ಮೂಲಕ ಪುನೀತ್ ನಮ್ಮ ಬಳಿಯೇ ಇದ್ದಾರೆ. ಅವರು ನಮ್ಮಿಂದ ದೂರವಾಗಿಲ್ಲ ಎಂದು ಬರೆದುಕೊಂಡಿದ್ದಾರೆ. ಪುನೀತ್‌ ಎಂದೆಂದಿಗೂ ಕರುನಾಡಿನ ಪವರ್ ಸ್ಟಾರ್ ಎಂದು ಅವರು ಹೇಳಿದ್ದಾರೆ.

ADVERTISEMENT

ಪುನೀತ್‌ ಮೊದಲ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು. ಅಪ್ಪು ನೆನೆದು ಪತ್ನಿ ಅಶ್ವಿನಿ ಭಾವುಕರಾದರು. ಶಿವರಾಜ್‌ ಕುಮಾರ್, ರಾಘವೇಂದ್ರ ರಾಜ್‌ಕುಮಾರ್‌, ವಿನಯ್ ರಾಜ್‌ಕುಮಾರ್‌ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.