ADVERTISEMENT

ದೆಹಲಿ: 150 ವಿದ್ಯುತ್‌ ಚಾಲಿತ ಬಸ್‌ಗಳ ಚಾಲನೆಗೆ ಹಸಿರು ನಿಶಾನೆ

ಪಿಟಿಐ
Published 24 ಮೇ 2022, 13:54 IST
Last Updated 24 ಮೇ 2022, 13:54 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಎಲೆಕ್ಟ್ರಿಕ್‌ ಬಸ್‌ಗಳಿಗೆ ಚಾಲನೆ ನೀಡಿ ಪ್ರಯಾಣಿಸಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಎಲೆಕ್ಟ್ರಿಕ್‌ ಬಸ್‌ಗಳಿಗೆ ಚಾಲನೆ ನೀಡಿ ಪ್ರಯಾಣಿಸಿದರು.   

ನವದೆಹಲಿ: ದೆಹಲಿ ಸರ್ಕಾರವು ಪ್ರಸ್ತಕ ವರ್ಷದೊಳಗೆ ಎರಡು ಸಾವಿರ ವಿದ್ಯುತ್‌ ಚಾಲಿತ ಬಸ್‌ಗಳನ್ನು ಆರಂಭಿಸುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮಂಗಳವಾರ ತಿಳಿಸಿದರು.

ವಿದ್ಯುತ್‌ ಚಾಲಿತ ಬಸ್‌ಗಳ ಚಾಲನೆಗೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ಮುಂದಿನ 10 ವರ್ಷಗಳಲ್ಲಿ ವಿದ್ಯುತ್‌ ಚಾಲಿತ ಬಸ್‌ಗಳನ್ನು ನಿಯೋಜನೆಗಾಗಿ ₹ 1,862 ಕೋಟಿ ಮೀಸಲಿಡಲಾಗಿದೆ. ಇಂದು 150 ಬಸ್‌ಗಳನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ. ಮುಂದಿನ ತಿಂಗಳಲ್ಲಿಯೂ ಸಹ 150 ಬಸ್‌ಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ. ಈ ಬಸ್‌ಗಳ ಬಳಕೆಯಿಂದ ಮಾಲಿನ್ಯ ತಗ್ಗಲಿದೆ ಎಂದು ಅವರು ಹೇಳಿದರು.

ಸರ್ಕಾರವು 600-700 ಸಾಂದ್ರೀಕೃತ ನೈಸರ್ಗಿಕ ಅನಿಲ (ಸಿಎನ್‌ಜಿ) ಎಂಜಿನ್‌ ಚಾಲಿತ ಬಸ್‌ಗಳನ್ನು ಖರೀದಿಸುವ ಯೋಜನೆ ಹೊಂದಿದೆ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.