ADVERTISEMENT

ಇ.ಡಿ ಸಮನ್ಸ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಸಿಎಂ ಕೇಜ್ರಿವಾಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ನವೆಂಬರ್ 2023, 4:32 IST
Last Updated 2 ನವೆಂಬರ್ 2023, 4:32 IST
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್   ಪಿಟಿಐ ಚಿತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯ(ಇ.ಡಿ) ನೀಡಿದ ಸಮನ್ಸ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿದ್ದಾರೆ.

ಅ.30 ರಂದು ಇ.ಡಿ ನೀಡಿದ ಸಮನ್ಸ್ ನೋಟಿಸ್‌ಗೆ ಉತ್ತರಿಸಿದ ಸಿಎಂ ಕೇಜ್ರಿವಾಲ್, ಸಮನ್ಸ್ ನೋಟಿಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತವಾಗಿದೆ ಎಂದು ದೂರಿದ್ದಾರೆ. ಬಿಜೆಪಿಯ ಕೋರಿಕೆಯ ಮೇರೆಗೆ ನೋಟಿಸ್ ಕಳುಹಿಸಲಾಗಿದೆ ಎಂದು ಆರೋಪಿಸಿದ ಅವರು, ಸಂಸ್ಥೆ ತಕ್ಷಣ ನೋಟಿಸ್ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಏಪ್ರಿಲ್‌ನಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಿಎಂ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿತ್ತು. ಆದರೆ ಆ.17ರಂದು ಸಿಬಿಐ ದಾಖಲಿಸಿದ ಎಫ್‌ಐಆರ್‌ನಲ್ಲಿ ಕೇಜ್ರಿವಾಲ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.