ADVERTISEMENT

ದೆಹಲಿ: ಶಾಲೆಗಳು, ಕುಡಿಯುವ ನೀರು, ರಸ್ತೆಗಳನ್ನು ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ

ಏಜೆನ್ಸೀಸ್
Published 6 ಮಾರ್ಚ್ 2025, 10:23 IST
Last Updated 6 ಮಾರ್ಚ್ 2025, 10:23 IST
<div class="paragraphs"><p>ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಶಾಲೆಗಳಿಗೆ ಭೇಟಿ ನೀಡಿ ಕುಡಿಯುವ ನೀರು, ನೈರ್ಮಲ್ಯ ಕುರಿತು ಪರಿಶೀಲನೆ ನಡೆಸಿದ್ದಾರೆ.</p></div>

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಶಾಲೆಗಳಿಗೆ ಭೇಟಿ ನೀಡಿ ಕುಡಿಯುವ ನೀರು, ನೈರ್ಮಲ್ಯ ಕುರಿತು ಪರಿಶೀಲನೆ ನಡೆಸಿದ್ದಾರೆ.

   

ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತಮ್ಮ ಕ್ಷೇತ್ರವಾದ ಶಾಲಿಮಾರ್ ಬಾಗ್‌ನಲ್ಲಿರುವ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಕುಡಿಯುವ ನೀರು, ನೈರ್ಮಲ್ಯ ಮತ್ತು ರಸ್ತೆಗಳ ಸ್ಥಿತಿಯನ್ನು ಪರಿಶೀಲನೆ ನಡೆಸಿದ್ದಾರೆ.

ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ.55ರ ಶಾಲಿಮಾರ್ ಗ್ರಾಮ ಚೌಕ್, ಮ್ಯಾಕ್ಸ್ ರಸ್ತೆ, ಹೈದರ್ ಪುರ ಗ್ರಾಮ ಚೌಕ್ ಮತ್ತಿತರ ಪ್ರದೇಶಗಳಿಗೆ ಗುಪ್ತಾ ಅವರು ಭೇಟಿ ನೀಡಿದ್ದರು. ಇದೇ ವೇಳೆ ಕುಡಿಯುವ ನೀರು, ನೈರ್ಮಲ್ಯ, ರಸ್ತೆಗಳಿಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ADVERTISEMENT

ಜನರೊಂದಿಗೆ ಸಂವಾದ ನಡೆಸಿದ ಅವರು, ಎಲ್ಲಾ ನಾಗರಿಕರಿಗೆ ಮೂಲ ಸೌಕರ್ಯಗಳನ್ನು ಸಮರ್ಪಕ ರೀತಿಯಲ್ಲಿ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಪುನರುಚ್ಚರಿಸಿದ್ದಾರೆ.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊಳಚೆ ನೀರಿನಿಂದಾಗಿ ಇಲ್ಲಿನ ಜನರು ಕಂಗಾಲಾಗಿದ್ದಾರೆ. ಚರಂಡಿಗಳು ನಿರ್ಮಾಣವಾಗಿಲ್ಲ... ಕೈಗಾರಿಕಾ ಪ್ರದೇಶದಲ್ಲಿ ಆಗಬೇಕಿದ್ದ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಸಣ್ಣ ಮಾರುಕಟ್ಟೆ ಸಂಕೀರ್ಣಗಳಲ್ಲೂ ಇದೇ ಸಮಸ್ಯೆ ಎದುರಾಗಿದೆ. ದೊಡ್ಡ ಮಾರುಕಟ್ಟೆ ಪ್ರದೇಶಗಳು ನೈರ್ಮಲ್ಯದಂತಹ ಸಮಸ್ಯೆಗಳನ್ನು ಎದುರಿಸುತ್ತಿವೆ. ನಮ್ಮ ಸರ್ಕಾರ ಈ ಸಮಸ್ಯೆಗಳನ್ನು ಪರಿಹರಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.