ದೆಹಲಿ ಸಿಎಂ ರೇಖಾ ಗುಪ್ತಾ
ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ ಎಂದು ಬಿಜೆಪಿ ಹೇಳಿದೆ.
ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಅಧಿಕೃತ ನಿವಾಸದಲ್ಲಿ ಬುಧವಾರ ಸಾಪ್ತಾಹಿಕ ‘ಜನ ಸುನ್‌ವಾಯೀ’ ಕಾರ್ಯಕ್ರಮದ ವೇಳೆ ಈ ದಾಳಿ ನಡೆದಿದೆ.
35 ವರ್ಷದ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದು, ಆತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಈ ದಾಳಿಯನ್ನು ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್‌ದೇವ ಹಾಗೂ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಖಂಡಿಸಿದ್ದಾರೆ.
ಇದೊಂದು ದುರಾದೃಷ್ಟಕರ ಘಟನೆ. ಇದು ದೆಹಲಿಯ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ. ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿಯೇ ಸುರಕ್ಷಿತವಾಗಿಲ್ಲ ಎಂದಾದರೆ, ಸಾಮಾನ್ಯ ಜನರ ಕಥೆಯೇನು ಎಂದು ದೇವೇಂದ್ರ ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.