ADVERTISEMENT

ದೆಹಲಿ ಕಾಲೇಜಿನಲ್ಲಿ ಅಪರಿಚಿತರಿಂದ ವಿದ್ಯಾರ್ಥಿನಿಯರಿಗೆ ಕಿರುಕುಳ

ಏಜೆನ್ಸೀಸ್
Published 10 ಫೆಬ್ರುವರಿ 2020, 18:23 IST
Last Updated 10 ಫೆಬ್ರುವರಿ 2020, 18:23 IST
ದೆಹಲಿ ಕಾಲೇಜೊಂದರಲ್ಲಿ ಅಪರಿಚಿತರಿಂದ ವಿದ್ಯಾರ್ಥಿನಿಯರಿಗೆ ಕಿರುಕುಳ
ದೆಹಲಿ ಕಾಲೇಜೊಂದರಲ್ಲಿ ಅಪರಿಚಿತರಿಂದ ವಿದ್ಯಾರ್ಥಿನಿಯರಿಗೆ ಕಿರುಕುಳ   

ನವದೆಹಲಿ: ಇಲ್ಲಿನ ಗಾರ್ಗಿ ಕಾಲೇಜಿನಲ್ಲಿ ಹೊರಗಿನಿಂದ ಯುವಕರು ಬಂದು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸೋಮವಾರ ಕಾಲೇಜಿಗೆ ಭೇಟಿ ನೀಡಿದ್ದಾರೆ.

ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಳ್ ಬೆಳಿಗ್ಗೆ ಕಾಲೇಜಿಗೆ ಭೇಟಿ ನೀಡಿ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿನಿಯರನ್ನು ವಿಚಾರಿಸಿ ಮಾಹಿತಿ ಪಡೆದಿದ್ದಾರೆ. ಕಾಲೇಜಿನಲ್ಲಿ ಅಪರಿಚಿತರು ತಾವು ಕೂಡ ವಿದ್ಯಾರ್ಥಿಗಳೆಂದು ಹೇಳಿಕೊಂಡು ಕಾಲೇಜಿನ ಆವರಣಕ್ಕೆ ಪ್ರವೇಶಿಸಿ ವಿದ್ಯಾರ್ಥಿನಿಯರನ್ನು ಕಿಚಾಯಿಸುವುದು, ರೇಗಿಸುವುದು ಮುಂತಾದ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ
ಸಂಬಂಧ ದೆಹಲಿ ಮಹಿಳಾ ಆಯೋಗದ ಕಚೇರಿಗೆ ದೂರು ನೀಡಿದ್ದರಿಂದ ಅಧ್ಯಕ್ಷರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ADVERTISEMENT

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಳ, ಈ ಘಟನೆ ಕುರಿತು ಪೊಲೀಸರಿಗೆ ಹಾಗೂ ಕಾಲೇಜು ಆಡಳಿತಾಧಿಕಾರಿಗೆ ನೋಟೀಸ್ ಜಾರಿ ಮಾಡಿದ್ದೇನೆ. ಯಾರೂ ಈ ಘಟನೆಯಲ್ಲಿ ಭಾಗಿಯಾಗಿದ್ದಾರೆ ಹಾಗೂ ಅವರನ್ನು ಯಾರು ರಕ್ಷಣೆ ಮಾಡುತ್ತಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.