ADVERTISEMENT

ಕೋವಿಡ್–19 ಪ್ರಕರಣಗಳ ಏರಿಕೆ: ದೆಹಲಿಯಲ್ಲಿ ರಾತ್ರಿ ಕರ್ಫ್ಯೂಗೆ ಚಿಂತನೆ

ಪಿಟಿಐ
Published 6 ಏಪ್ರಿಲ್ 2021, 1:00 IST
Last Updated 6 ಏಪ್ರಿಲ್ 2021, 1:00 IST
ಸಾಂದರ್ಭಿಕ ಚಿತ್ರ (ಎಎಫ್‌ಪಿ)
ಸಾಂದರ್ಭಿಕ ಚಿತ್ರ (ಎಎಫ್‌ಪಿ)   

ನವದೆಹಲಿ: ಕೋವಿಡ್–19 ಸೋಂಕು ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಕಾರಣ ರಾತ್ರಿ ಕರ್ಫ್ಯೂ ಹೇರುವ ಪ್ರಸ್ತಾವವನ್ನು ದೆಹಲಿ ಸರ್ಕಾರ ಪರಿಶೀಲಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ರಾತ್ರಿ ಕರ್ಫ್ಯೂ ವಿಧಿಸುವ ಪ್ರಸ್ತಾವ ಪರಿಶೀಲನೆಯಲ್ಲಿದೆ ಈ ಬಗ್ಗೆ ವಿವರವಾಗಿ ಚರ್ಚಿಸಲಾಗುವುದು. ಕರ್ಫ್ಯೂ ಅವಧಿ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆವರೆಗೆ ಇರುವ ಸಾಧ್ಯತೆಯಿದೆ’ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯಲ್ಲಿ ಕೋವಿಡ್ ನಾಲ್ಕನೇ ಅಲೆ ಕಾಣಿಸಿಕೊಂಡಿದೆ. ಆದರೆ ಮತ್ತೆ ಲಾಕ್‌ಡೌನ್ ಮಾಡುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಹೇಳಿದ್ದರು.

ಪ್ರಸ್ತುತ ಸನ್ನಿವೇಶದಲ್ಲಿ ಲಾಕ್‌ಡೌನ್‌ ಮಾಡುವ ಬಗ್ಗೆ ನಾವು ಯೋಚಿಸುತ್ತಿಲ್ಲ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದು. ಸಾರ್ವಜನಿಕರ ಬಳಿ ಚರ್ಚಿಸದೆ ಲಾಕ್‌ಡೌನ್‌ನಂತಹ ನಿರ್ಧಾರವನ್ನು ಕೈಗೊಳ್ಳುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದರು.

ದೆಹಲಿ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಸೋಮವಾರ ಅಲ್ಲಿ 3,548 ಹೊಸ ಪ್ರಕರಣಗಳು ದೃಢಪಟ್ಟಿದ್ದು, 15 ಸಾವು ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.