ADVERTISEMENT

ದೆಹಲಿ: ಮುಂದುವರಿದ ಕೊರೊನಾ ಅಟ್ಟಹಾಸ

25,462 ಜನರಿಗೆ ಸೋಂಕು, 161 ಸಾವು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 15:21 IST
Last Updated 18 ಏಪ್ರಿಲ್ 2021, 15:21 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಪಸರಿಸುತ್ತಿರುವ ಪ್ರಮಾಣದಲ್ಲಿನ ತೀವ್ರಗತಿಯು ಭಾನುವಾರವೂ ಮುಂದುವರಿದಿದ್ದು, ಪರೀಕ್ಷೆಗೆ ಒಳಪಟ್ಟಿರುವ ಶೇ 29.74ರಷ್ಟು ಜನರಲ್ಲಿ ಸೋಂಕು ಪತ್ತೆಯಾಗಿದೆ.

ಶನಿವಾರದಿಂದಲೇ ವಾರಾಂತ್ಯದ ಕರ್ಫ್ಯೂ ಹೇರಲಾಗಿದ್ದರೂ ಭಾನುವಾರ ಸಂಜೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಪಟ್ಟ ಒಟ್ಟು 82,620 ಜನರಲ್ಲಿ 25,462 ಜನ ಸೋಂಕಿಗೆ ಒಳಗಾಗಿದ್ದಾರೆ.

ಇದೇ ಅವಧಿಯಲ್ಲಿ ವಿವಿಧ ಆಸ್ಪತ್ರೆಗಳ ತುರ್ತು ಚಿಕಿತ್ಸಾ ಘಟಕಗಳಲ್ಲಿ ದಾಖಲಾಗಿದ್ದ 161 ಜನ ಚಿಕಿತ್ಸೆಗೆ ಸ್ಪಂದಿಸದೇ ಸಾವಿಗೀಡಾಗಿದ್ದಾರೆ. ಒಟ್ಟು 20,159 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗಳಿಗೆ ಮರಳಿದ್ದಾರೆ. 74,941 ಸಕ್ರಿಯ ಪ್ರಕರಣಗಳು ಇವೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ADVERTISEMENT

ಶನಿವಾರ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದ 24,375 (ಶೇ 24.56) ಜನರಲ್ಲಿ ಸೋಂಕು ಪತ್ತೆಯಾಗಿತ್ತು. 167 ಜನ ಸಾವಿಗೀಡಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.