ADVERTISEMENT

ಪ್ರಚೋದನಕಾರಿ ಭಾಷಣ: ಜೆಎನ್‌ಯು ವಿದ್ಯಾರ್ಥಿ ಶಾರ್ಜೀಲ್‌ಗೆ ಜಾಮೀನು ನಿರಾಕರಣೆ

ಪಿಟಿಐ
Published 22 ಅಕ್ಟೋಬರ್ 2021, 10:48 IST
Last Updated 22 ಅಕ್ಟೋಬರ್ 2021, 10:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಪ್ರಚೋದನಕಾರಿ ಭಾಷಣ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ(ಜೆಎನ್‌ಯು) ವಿದ್ಯಾರ್ಥಿ ಶಾರ್ಜೀಲ್‌ ಇಮಾಮ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

‘ಅವರ ಭಾಷಣದಲ್ಲಿ ಕೋಮುಭಾವನೆ ಕೆರಳಿಸುವ ಸಾಲುಗಳಿದ್ದು, ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಅಂಶಗಳಿವೆ‘ ಎಂದು ಜಾಮೀನು ನಿರಾಕರಿಸಿದ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಅನೂಜ್ ಅಗರವಾಲ್ ಹೇಳಿದರು.

‘ಇಮಾಮ್ ಭಾಷಣವನ್ನು ಸರಳವಾಗಿ ಓದಿ ನೋಡಿದರೂ, ಅದರಲ್ಲಿ ಕೋಮು ಭಾವನೆ ಕೆರಳಿಸುವ ಸಾಲುಗಳಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಬೆಂಕಿಯುಂಡೆಯಂತಹ ಮಾತುಗಳು, ಸಮಾಜದಲ್ಲಿ ಶಾಂತಿ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವಂತಿದ್ದವು’ ಎಂದು ಹೇಳಿದರು.

ADVERTISEMENT

ಪೊಲೀಸರ ಪ್ರಕಾರ, ಇಮಾಮ್‌ 2019ರ ಡಿಸೆಂಬರ್ 13ರಂದು ಪ್ರಚೋದನಕಾರಿ ಭಾಷಣ ಮಾಡಿದ್ದು, ಅದು ಗಲಭೆ ಸೃಷ್ಟಿಗೆ ಕಾರಣವಾಯಿತು. ಈ ಸಂದರ್ಭದಲ್ಲಿ ಜಾಮಿಯಾ ನಗರದಲ್ಲಿ 3 ಸಾವಿರಕ್ಕೂ ಹೆಚ್ಚು ಜನರನ್ನೊಳಗೊಂಡ ಗುಂಪುಗಳು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿತು. ನಂತರ ವಾಹನಗಳನ್ನು ಸುಟ್ಟು ಹಾಕಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.