ADVERTISEMENT

ಆಕಾರ್ ಪಟೇಲ್‌ಗೆ ಹಿನ್ನಡೆ: ಅನುಮತಿಯಿಲ್ಲದೆ ದೇಶ ಬಿಟ್ಟು ಹೋಗದಂತೆ ನಿರ್ದೇಶನ

ಪಿಟಿಐ
Published 8 ಏಪ್ರಿಲ್ 2022, 11:21 IST
Last Updated 8 ಏಪ್ರಿಲ್ 2022, 11:21 IST
ಆಕಾರ್ ಪಟೇಲ್, ಲೇಖಕ
ಆಕಾರ್ ಪಟೇಲ್, ಲೇಖಕ   

ನವದೆಹಲಿ(ಪಿಟಿಐ): ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾದ ಅಧ್ಯಕ್ಷ ಆಕಾರ್ ಪಟೇಲ್ ಅವರು ತನ್ನ ಅನುಮತಿ ಇಲ್ಲದೆ ದೇಶ ಬಿಟ್ಟು ಹೋಗುವಂತಿಲ್ಲ ಎಂದು ದೆಹಲಿ ನ್ಯಾಯಾಲಯ ನಿರ್ದೇಶನ ನೀಡಿದೆ. ಅಲ್ಲದೆ ಅವರ ವಿರುದ್ಧ ಸಿಬಿಐ ಹೊರಡಿಸಿದ್ದ ಲುಕ್ಔಟ್ ನೋಟಿಸ್ ಹಿಂಪಡೆಯಲು ಸೂಚಿಸಿದ್ದ ಆದೇಶಕ್ಕೂ ನ್ಯಾಯಾಲಯ ಶುಕ್ರವಾರ ತಡೆ ನೀಡಿದೆ.

ಆಕಾರ್ ಪಟೇಲ್ ಅವರ ವಿರುದ್ಧ ಹೊರಡಿಸಲಾಗಿರುವ ಲುಕ್ಔಟ್ ನೋಟಿಸ್ ಅನ್ನು ಹಿಂಪಡೆಯಬೇಕು. ಅಲ್ಲದೆ ಕ್ಷಮಾಪಣೆ ಕೋರಬೇಕೆಂಬ ಮ್ಯಾಜಿಸ್ಟೇಟ್ ನ್ಯಾಯಾಲಯದ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಸಿಬಿಐ ಮನವಿ ಮಾಡಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಸಂತೋಷ್ ಸ್ನೇಹಿ ಮಾನ್‌ ಅವರು, ಈ ಆದೇಶವನ್ನು ನೀಡಿದ್ದಾರೆ. ಅಲ್ಲದೆ ಈ ಕುರಿತ ಹೆಚ್ಚಿನ ವಿಚಾರಣೆಯನ್ನು ಏಪ್ರಿಲ್ 12ಕ್ಕೆ ಮುಂದೂಡಲಾಗಿದೆ.

ಈ ಸಂಬಂಧ ಗುರುವಾರ ಆದೇಶ ಹೊರಡಿಸಿದ್ದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪವನ್ ಕುಮಾರ್ ಅವರು, 'ಸಾಮಾಜಿಕ ಕಾರ್ಯಕರ್ತ ಆಕಾರ್ ಪಟೇಲ್ ವಿರುದ್ಧದ ಲುಕ್ಔಟ್ ನೋಟಿಸ್ ಅನ್ನು ಹಿಂಪಡೆಯಬೇಕು. ಜೊತೆಗೆ ಆಕಾರ್ ಪಟೇಲ್ ಅವರು ಕ್ಷಮಾಪಣೆಯನ್ನು ಕೋರಬೇಕು. ಈ ಕುರಿತ ವರದಿಯನ್ನು ಏಪ್ರಿಲ್ 30ರಂದು ಸಲ್ಲಿಸಬೇಕು' ಎಂದು ಹೇಳಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.