ADVERTISEMENT

ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ ಖುಲಾಸೆ

ಪಿಟಿಐ
Published 11 ಆಗಸ್ಟ್ 2021, 8:39 IST
Last Updated 11 ಆಗಸ್ಟ್ 2021, 8:39 IST
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್   

ನವದೆಹಲಿ: 2018ರಲ್ಲಿ ದೆಹಲಿಯ ಅಂದಿನ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಕೋರ್ಟ್ ಆರೋಪ ಮುಕ್ತಗೊಳಿಸಿದೆ.

ಆಡಳಿತಾರೂಢ ಆಮ್ ಆದ್ಮಿ ಪಕ್ಷ(ಎಎಪಿ)ದ ಒಂಬತ್ತು ಶಾಸಕರನ್ನು ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ. ಆದರೆ, ಇಬ್ಬರು ಎಎಪಿ ಶಾಸಕರಾದ ಅಮಾನತುಲ್ಲಾ ಖಾನ್ ಮತ್ತು ಪ್ರಕಾಶ್ ಜರ್ವಾಲ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ನ್ಯಾಯಾಲಯ ಆದೇಶಿಸಿದೆ.

ಫೆಬ್ರುವರಿ 19, 2018 ರಂದು ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಂಶು ಪ್ರಕಾಶ್ ಮೇಲೆ ನಡೆದ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರಲ್ಲದೆ, 11 ಎಎಪಿ ಶಾಸಕರನ್ನು ಸಹ ಪ್ರಕರಣದಲ್ಲಿ ಆರೋಪಿಗಳೆಂದು ಉಲ್ಲೇಖಿಸಲಾಗಿತ್ತು.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಕೇಜ್ರಿವಾಲ್, ಡಿಸಿಎಂ ಮನೀಶ್ ಸಿಸೋಡಿಯಾ ಮತ್ತು ಇತರ 9 ಎಎಪಿ ಶಾಸಕರಿಗೆ ಅಕ್ಟೋಬರ್ 2018ರಲ್ಲಿ ಜಾಮೀನು ನೀಡಲಾಗಿತ್ತು.

ಅಮಾನತುಲ್ಲಾ ಖಾನ್ ಮತ್ತು ಪ್ರಕಾಶ್ ಜರ್ವಾಲ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು.

ಮುಖ್ಯ ಕಾರ್ಯದರ್ಶಿಗಳ ಮೇಲೆ ಹಲ್ಲೆ ಕುರಿತಂತೆ ಭಾರೀ ಟೀಕೆ ವ್ಯಕ್ತವಾಗಿತ್ತು. ಅಧಿಕಾರಶಾಹಿಗಳ ನಡುವೆ ಜಟಾಪಟಿಗೆ ಕಾರಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.