ADVERTISEMENT

ಜ್ಞಾನವಾಪಿ ಪ್ರಕರಣ ಕುರಿತು ಆಕ್ಷೇಪಾರ್ಹ ಪೋಸ್ಟ್: ಬಂಧಿತ ಪ್ರೊಫೆಸರ್‌ಗೆ ಜಾಮೀನು

ಪಿಟಿಐ
Published 21 ಮೇ 2022, 11:55 IST
Last Updated 21 ಮೇ 2022, 11:55 IST
ಚಿತ್ರ ಕೃಪೆ: Twitter/@ratanlal72
ಚಿತ್ರ ಕೃಪೆ: Twitter/@ratanlal72   

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ 'ಶಿವಲಿಂಗ' ಪತ್ತೆ ಕುರಿತ ಹೇಳಿಕೆಗಳನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಬಂಧಿತರಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ.

ರತನ್ ಲಾಲ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿತ್ತು.

ಭಾರತೀಯ ದಂಡ ಸಂಹಿತೆಯ 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಮೇಲೆ ದುಷ್ಪರಿಣಾಮ ಬೀರುವ ಕೃತ್ಯಗಳು) ಮತ್ತು 295ಎ (ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧಾರ್ಮಿಕ ಭಾವನೆಗಳು, ಧರ್ಮವನ್ನು ಅವಮಾನಿಸುವ ಕೃತ್ಯ) ಅಡಿಯಲ್ಲಿ ಲಾಲ್ ಅವರನ್ನು ಬಂಧಿಸಲಾಗಿದೆ ಎಂದು ದೆಹಲಿಯ ಉತ್ತರ ಸೈಬರ್ ಪೊಲೀಸರು ತಿಳಿಸಿದ್ದರು.

ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ಲಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.