
ಪಿಟಿಐ
ನವದೆಹಲಿ: ದೆಹಲಿಯಲ್ಲಿ 2020ರಲ್ಲಿ ನಡೆದಿದ್ದ ಗಲಭೆಗೆ ಪಿತೂರಿ ನಡೆಸಿದ ಆರೋಪದಡಿ ಬಂಧಿತರಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ದೆಹಲಿಯ ನ್ಯಾಯಾಲಯವೊಂದು ಗುರುವಾರ ಮಧ್ಯಂತರ ಜಾಮೀನು ನೀಡಿದೆ.
ಸಹೋದರಿಯ ಮದುವೆಯಲ್ಲಿ ಭಾಗವಹಿಸಲು ಉಮರ್‌ಗೆ ಡಿಸೆಂಬರ್ 16ರಿಂದ 29ರವರೆಗೆ ಮಧ್ಯಂತರ ಜಾಮೀನು ನೀಡಲಾಗಿದೆ.
‘ಜಾಮೀನು ಅವಧಿಯಲ್ಲಿ ಉಮರ್ ಸಾಮಾಜಿಕ ಜಾಲತಾಣಗಳನ್ನು ಬಳಸುವಂತಿಲ್ಲ. ಕೇವಲ ಕುಟುಂಬ ಸದಸ್ಯರು, ಸಂಬಂಧಿಕರು ಮತ್ತು ಸ್ನೇಹಿತರನ್ನು ಮಾತ್ರ ಭೇಟಿ ಮಾಡಬೇಕು. ಮನೆ ಮತ್ತು ಮದುವೆ ನಡೆಯುವ ಸ್ಥಳಗಳಿಗೆ ಮಾತ್ರ ತೆರಳಬೇಕು’ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಸಮೀರ್ ಬಾಜಪೇಯಿ ಅವರು ಷರತ್ತು ವಿಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.