ADVERTISEMENT

ಚೀನಾ ವೀಸಾ ಹಗರಣ: ಸಂಸದ ಕಾರ್ತಿ ವಿರುದ್ಧ ಆರೋಪ ನಿಗದಿಪಡಿಸುವಂತೆ ಕೋರ್ಟ್ ಆದೇಶ

ಪಿಟಿಐ
Published 23 ಡಿಸೆಂಬರ್ 2025, 14:43 IST
Last Updated 23 ಡಿಸೆಂಬರ್ 2025, 14:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಚೀನಾ ವೀಸಾ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಪಿ. ಚಿದಂಬರಂ ಮತ್ತು ಇತರ ಆರು ಜನರ ವಿರುದ್ಧ ಆರೋಪ ನಿಗದಿಪಡಿಸುವಂತೆ ದೆಹಲಿ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ (ಸಿಬಿಐ) ದಿಗ್ ವಿನಯ್ ಸಿಂಗ್, ಏಳು ಆರೋಪಿಗಳ ವಿರುದ್ಧ ಆರೋಪಗಳನ್ನು ನಿಗದಿಪಡಿಸುವಂತೆ ಆದೇಶಿಸಿದರು. ಪ್ರಕರಣದ ಮತ್ತೊಬ್ಬ ಆರೋಪಿ‌ ಚೇತನ್ ಶ್ರೀವಾಸ್ತವ ಎಂಬವರನ್ನು ಖುಲಾಸೆಗೊಳಿಸಿದರು.

ಏಳು ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿಯ ಆರೋಪದ ಮೇಲೆ ಆರೋಪಗಳನ್ನು ನಿಗದಿಪಡಿಸುವಂತೆ ನ್ಯಾಯಾಲಯ ಆದೇಶಿಸಿದೆ. ಆದೇಶದಲ್ಲಿನ ಮತ್ತಷ್ಟು ವಿವರಣೆನ್ನು ನಿರೀಕ್ಷಿಸಲಾಗುತ್ತಿದೆ.

ADVERTISEMENT

2011ರಲ್ಲಿ ಕಾರ್ತಿ ಅವರ ತಂದೆ ಪಿ. ಚಿದಂಬರಂ ಅವರು ಕೇಂದ್ರ ಗೃಹ ಸಚಿವರಾಗಿದ್ದಾಗ, ವಿದ್ಯುತ್ ಕಂಪನಿಯೊಂದರ ಚೀನಾ ಪ್ರಜೆಗಳಿಗೆ ವೀಸಾ ಕೊಡಿಸುವಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಮತ್ತು ಇತರರ ವಿರುದ್ಧ ಸಿಬಿಐ 2024ರ ಅಕ್ಟೋಬರ್‌ ಆರಂಭದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.