ದೆಹಲಿ ಸಿಎಂ ಅತಿಶಿ
– ಪಿಟಿಐ
ನವದೆಹಲಿ: ಬಿಜೆಪಿ ನಾಯಕರೊಬ್ಬರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅತಿಶಿ ಅವರಿಗೆ ನೀಡಲಾಗಿದ್ದ ಸಮನ್ಸ್ ಅನ್ನು ದೆಹಲಿ ನ್ಯಾಯಾಲಯ ಇಂದು(ಮಂಗಳವಾರ) ರದ್ದುಗೊಳಿಸಿದೆ.
ಬಿಜೆಪಿ ಮುಖಂಡ ಪ್ರವೀಣ್ ಶಂಕರ್ ಕಪೂರ್ ಅವರು ಸಿಎಂ ಅತಿಶಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಪ್ರಕರಣ ಸಂಬಂಧ ತನ್ನ ವಿರುದ್ಧ ಸಮನ್ಸ್ ಜಾರಿ ಮಾಡಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಹಿಂದಿನ ತೀರ್ಪನ್ನು ಪ್ರಶ್ನಿಸಿ ಅತಿಶಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಆಲಿಸಿದ ವಿಶೇಷ ನ್ಯಾಯಾಧೀಶರಾದ ವಿಶಾಲ್ ಗೋಗ್ನೆ ಸಮನ್ಸ್ ರದ್ದುಪಡಿಸಿ ಆದೇಶಿಸಿದ್ದಾರೆ.
ಅತಿಶಿಯವರ ಹೇಳಿಕೆಗಳು ತನ್ನ ಪ್ರತಿಷ್ಠೆಗೆ ಹಾನಿಯುಂಟು ಮಾಡಿವೆ ಎಂದು ಕಪೂರ್ ಆರೋಪಿಸಿದ್ದರು. ಅತಿಶಿ ಪರ ವಾದ ಮಂಡಿಸಿದ ವಕೀಲರು, ಆಪಾದಿತ ಮಾನಹಾನಿಕರ ಹೇಳಿಕೆಯು ಬಿಜೆಪಿಯ ವಿರುದ್ಧವೇ ಹೊರತು ವ್ಯಕ್ತಿ ವಿರುದ್ಧ ಅಲ್ಲ. ವೈಯಕ್ತಿಕವಾಗಿ ಕಪೂರ್ ಅವರನ್ನು ಉದ್ದೇಶಿಸಿ ನೀಡಿದ ಹೇಳಿಕೆಯಲ್ಲ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.