
ಪಿಟಿಐ
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ವಿರುದ್ಧ ದಾಖಲಾಗಿರುವ ಪ್ರಕರಣದ ತೀರ್ಪನ್ನು ದೆಹಲಿಯ ನ್ಯಾಯಾಲಯವೊಂದು ಕಾಯ್ದಿರಿಸಿದೆ.
ದೆಹಲಿಯ ಜನಕಪುರಿ ಮತ್ತು ವಿಕಾಸಪುರಿ ಪ್ರದೇಶಗಳಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಸಜ್ಜನ್ ಆರೋಪಿಯಾಗಿದ್ದು, ಇದಕ್ಕೆ ಸಂಬಂಧಿಸಿದ ವಿಚಾರಣೆ, ವಾದ–ಪ್ರತಿವಾದಗಳು ಮುಕ್ತಾಯಗೊಂಡಿವೆ.
ಹೀಗಾಗಿ ವಿಶೇಷ ನ್ಯಾಯಾಧೀಶರಾದ ದಿಗ್ ವಿನಯ್ ಸಿಂಗ್ ಅವರು ಜನವರಿ 22ಕ್ಕೆ ಪ್ರಕರಣದ ತೀರ್ಪು ಕಾಯ್ದಿರಿಸಿದ್ದಾರೆ. ಸೋಮವಾರ ಬಿಗಿ ಭದ್ರತೆಯೊಂದಿಗೆ ಸಜ್ಜನ್ ಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.