
ನವದೆಹಲಿ: ಅಲ್ ಫಲಾಹ್ ಗ್ರೂಪ್ ಮುಖ್ಯಸ್ಥ ಜವಾದ್ ಅಹ್ಮದ್ ಸಿದ್ದೀಕಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ಅಂಗೀಕರಿಸುವ ಕುರಿತ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಫೆಬ್ರವರಿ 13ಕ್ಕೆ ನಿಗದಿಪಡಿಸಿದೆ.
ಆರೋಪಪಟ್ಟಿ ಮತ್ತು ಸಂಬಂಧಿತ ದಾಖಲೆಗಳು 10,000 ಪುಟಗಳಷ್ಟು ದೊಡ್ಡದಾಗಿರುವುದರಿಂದ ಅವುಗಳನ್ನು ಪರಿಶೀಲಿಸಲು ಪ್ರತಿವಾದಿ ವಕೀಲರು ಹೆಚ್ಚಿನ ಸಮಯವನ್ನು ಕೋರಿದ್ದರು. ಹಾಗಾಗಿ, ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಶೀತಲ್ ಚೌಧರಿ ಪ್ರಧಾನ್ ಅವರು ಪ್ರಕರಣದ ವಿಚಾರಣೆಯನ್ನು ಮುಂದೂಡಿ ಶನಿವಾರ ಆದೇಶ ಹೊರಡಿಸಿದರು.
ನವೆಂಬರ್ 10ರಂದು ಕೆಂಪು ಕೋಟೆಯ ಬಳಿ ನಡೆದ ಸ್ಫೋಟದ ನಂತರ ಭದ್ರತಾ ಸಂಸ್ಥೆಗಳ ಕಣ್ಗಾವಲಿನಲ್ಲಿದ್ದ ಹರಿಯಾಣದ ಅಲ್ ಫಲಾಹ್ ವಿಶ್ವವಿದ್ಯಾಲಯದ ₹140 ಕೋಟಿ ಮೌಲ್ಯದ ಜಮೀನು ಮತ್ತು ಕಟ್ಟಡಗಳನ್ನು ಜನವರಿ 16ರಂದು ಇ.ಡಿ ಮುಟ್ಟುಗೋಲು ಹಾಕಿಕೊಂಡಿತ್ತು.
ಅಲ್ ಫಲಾಹ್ ಗ್ರೂಪ್ ಅಧ್ಯಕ್ಷ ಜವಾದ್ ಅಹ್ಮದ್ ಸಿದ್ದೀಕಿ ಮತ್ತು ಅವರ ಚಾರಿಟೇಬಲ್ ಟ್ರಸ್ಟ್ ವಿರುದ್ಧವೂ ಇ.ಡಿ ಆರೋಪಪಟ್ಟಿ ಸಲ್ಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.