ADVERTISEMENT

ದೆಹಲಿ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಕರ್ನಾಟಕದ ಇಂದಿರಾ ಕ್ಯಾಂಟೀನ್‌

ಪಿಟಿಐ
Published 2 ಫೆಬ್ರುವರಿ 2020, 19:45 IST
Last Updated 2 ಫೆಬ್ರುವರಿ 2020, 19:45 IST
ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ಸುಭಾಷ್‌ ಚೋಪ್ರಾ ಅವರು ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು –ಪಿಟಿಐ ಚಿತ್ರ
ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ಸುಭಾಷ್‌ ಚೋಪ್ರಾ ಅವರು ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು –ಪಿಟಿಐ ಚಿತ್ರ   

ನವದೆಹಲಿ: ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಕರ್ನಾಟಕದ ಮಾದರಿಯಲ್ಲಿ 100 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಭರವಸೆ ನೀಡಿದೆ.

₹15ಕ್ಕೆ ಊಟ ಲಭಿಸುವ ಇಂತಹ ಕ್ಯಾಂಟೀನ್‌ಗಳನ್ನು ಮಹಿಳಾ ಸಿಬ್ಬಂದಿಯೇ ನಿರ್ವಹಿಸಲಿದ್ದಾರೆ ಎಂದು ಭಾನುವಾರ ಪ್ರಣಾಳಿಕೆ ಮಂಡಿಸಿದ ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ಸುಭಾಷ್‌ ಚೋಪ್ರಾ ಹೇಳಿದ್ದಾರೆ.

ಯುವ ಸ್ವಾಭಿಮಾನ್‌ ಯೋಜನೆ ಜಾರಿಗೆ ತರುವ ಮೂಲಕ ಪದವೀಧರ ನಿರುದ್ಯೋಗಿಗಳಿಗೆ ತಿಂಗಳಿಗೆ ₹ 5 ಸಾವಿರ ಹಾಗೂ ಸ್ನಾತಕೋತ್ತರ ಪದವೀಧರರಿಗೆ ₹7,500 ನಿರುದ್ಯೋಗ ವೇತನ ನೀಡಲಾಗುವುದು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಲಾಗುವುದು ಮತ್ತು ಎನ್‌ಆರ್‌ಸಿಯನ್ನು ಜಾರಿ ಮಾಡುವುದಿಲ್ಲ ಎಂದೂ ಭರವಸೆ ನೀಡಿದ್ದಾರೆ.

ADVERTISEMENT

ತಿಂಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡಲಾಗುವುದು ಜೊತೆಗೆ ನೀರು ಮತ್ತು ವಿದ್ಯುತ್‌ ಬಳಕೆದಾರರಿಗೆ ಕ್ಯಾಶ್‌ಬ್ಯಾಕ್‌ ಯೋಜನೆ ಜಾರಿಗೊಳಿಸಲಾಗುವುದು. ಲೋಕಸಭಾ ಚುನಾವಣೆಯ ವೇಳೆ ಭರವಸೆ ನೀಡಿದಂತೆ ‘ನ್ಯಾಯ್’ ಯೋಜನೆಯನ್ನೂ ಜಾರಿ ಮಾಡಲಾಗುವುದು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.