ನವದೆಹಲಿ: ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಎಪಿ ಪರಸ್ಪರ ಮೈತ್ರಿ ಮಾಡಿಕೊಳ್ಳದೆ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. 70 ಕ್ಷೇತ್ರಗಳ ಪೈಕಿ 12 ಕಡೆಗಳಲ್ಲಿ ಎಎಪಿ ಗೆಲುವಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಅಡ್ಡಿಯಾಗಿ ಪರಿಣಮಿಸಿದ್ದಾರೆ. ಎಎಪಿ ಅಭ್ಯರ್ಥಿಗಳು ಕೆಲವು ಕ್ಷೇತ್ರಗಳಲ್ಲಿ ಕಡಿಮೆ ಅಂತರದಲ್ಲಿ ಸೋತಿದ್ದಾರೆ. ಈ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಅಂತರಕ್ಕಿಂತ ಹೆಚ್ಚಿನ ಮತಗಳು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿದ್ದಿವೆ.
ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ ಕ್ಷೇತ್ರದಲ್ಲಿ ಬಿಜೆಪಿಯ ಶಿಖಾ ರಾಯ್ ಅವರು ಎಎಪಿಯ ಸೌರಭ್ ಭಾರದ್ವಾಜ್ ಅವರನ್ನು 3,188 ಮತಗಳಿಂದ ಮಣಿಸಿದ್ದಾರೆ. ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗಾರ್ವಿತ್ ಸಿಂಘ್ವಿ ಅವರಿಗೆ 6,711 ಮತಗಳು ಬಿದ್ದಿವೆ. ಕಾಂಗ್ರೆಸ್–ಎಎಪಿ ಮೈತ್ರಿ ಇದ್ದಿದ್ದರೆ ಸೌರಭ್ ಗೆಲುವು ಸಾಧಿಸುವ ಅವಕಾಶವಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.