ADVERTISEMENT

ದೆಹಲಿ ಚುನಾವಣಾ ಫಲಿತಾಂಶ: ಇವಿಎಂ ಬಗ್ಗೆ ದಿಗ್ವಿಜಯ್ ಸಿಂಗ್ ಅನುಮಾನ

ಪಿಟಿಐ
Published 11 ಫೆಬ್ರುವರಿ 2020, 7:24 IST
Last Updated 11 ಫೆಬ್ರುವರಿ 2020, 7:24 IST
ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್   

ನವದೆಹಲಿ:ದೆಹಲಿ ವಿಧಾನಸಭಾ ಚುನಾವಣಾ ಮತ ಎಣಿಕೆ ಪ್ರಗತಿಯಲ್ಲಿರುವಾಗಲೇ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಇವಿಎಂ ಬಳಸುವ ಬಗ್ಗೆ ಸುಪ್ರೀಂ ಕೋರ್ಟ್‌ ಮತ್ತು ಚುನಾವಣಾ ಆಯೋಗ ಮತ್ತೊಮ್ಮೆ ಪರಿಶೀಲನೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

‘ಚಿಪ್ ಹೊಂದಿರುವ ಯಾವುದೇ ಯಂತ್ರವು ಟ್ಯಾಂಪರ್‌ಪ್ರೂಫ್ (ಹ್ಯಾಕ್‌ ಮಾಡಲು ಸಾಧ್ಯವಾಗದ್ದು) ಅಲ್ಲ. ದಯಮಾಡಿ ಒಂದು ಕ್ಷಣ ಯೋಚಿಸಿ, ಅಭಿವೃದ್ಧಿ ಹೊಂದಿದ ದೇಶಗಳುಇವಿಎಂ ಬಳಸುತ್ತಿಲ್ಲ’ ಎಂದುದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ADVERTISEMENT

‘ಭಾರತದ ಚುನಾವಣೆಗಳಲ್ಲಿ ಇವಿಎಂ ಬಳಸುವ ಬಗ್ಗೆ ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟ್‌ ಮತ್ತೊಮ್ಮೆ ಪರಿಶೀಲನೆ ನಡೆಸಲಿವೆಯೇ? ನಮ್ಮದು ಜಗತ್ತಿನಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ. 130 ಕೋಟಿ ಜನರ ಆದೇಶವನ್ನು ಕೆಲವೇ ಮಂದಿ ನಿರ್ಲಜ್ಜ ಜನರು ಹ್ಯಾಕ್‌ ಮಾಡಲು ಬಿಡಲಾಗದು’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.