ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್
-ಪಿಟಿಐ ಚಿತ್ರ
ಇಂದೋರ್: ತುಕ್ಡೆ-ತುಕ್ಡೆ ಗ್ಯಾಂಗ್‌ನ ನಾಯಕರು ಹಾಗೂ ಸಂಕುಚಿತ ಮನಸ್ಥಿತಿ ಇರುವವರು ಸತತವಾಗಿ ಸೋಲನುಭವಿಸುತ್ತಿದ್ದಾರೆ ಎಂದು ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಇಂದೋರ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಚುನಾವಣೆಯಲ್ಲಿ ಪದೇ ಪದೇ ಸೋಲುತ್ತಿದ್ದು, ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ವಿಪಕ್ಷಗಳ ಇಂಡಿಯಾ ಒಕ್ಕೂಟದ ವಿರುದ್ಧ ಕಿಡಿ ಕಾರಿರುವ ಅವರು, ತುಕ್ಡೆ-ತುಕ್ಡೆ ಗ್ಯಾಂಗ್‌ನ ಭಾಗವಾಗಿರುವ, ಸಂಕುಚಿತ ಮನೋಭಾವದ ಮತ್ತು ವರ್ಷಗಳಿಂದ ರಾಜ್ಯ ಮತ್ತು ದೇಶವನ್ನು ದಾರಿ ತಪ್ಪಿಸುತ್ತಿರುವ ಶಕ್ತಿಗಳು ನಿರಂತರವಾಗಿ ಸೋಲುತ್ತಿವೆ. ಎಲ್ಲರೂ ಕೊಳಕು ತಂತ್ರಗಳನ್ನು ಬಳಸಿ ಒಂದಾಗುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ.
ಹರಿಯಾಣ, ಮಹಾರಾಷ್ಟ್ರ ಮತ್ತು ದೆಹಲಿ ಚುನಾವಣೆಗಳ ಫಲಿತಾಂಶಗಳು 2024ರ ಲೋಕಸಭಾ ಚುನಾವಣೆಯ ಹಾದಿಯಲ್ಲಿ ಸಾಗಿವೆ ಎಂದು ಅವರು ಹೇಳಿದ್ದಾರೆ.
ಜನರನ್ನು ದಾರಿತಪ್ಪಿಸಲು ವಿರೋಧ ಪಕ್ಷಗಳು ದೇಶದಾದ್ಯಂತ ಕುತಂತ್ರ ಮಾಡುತ್ತಿದ್ದಾರೆ. ಚುನಾವಣಾ ಫಲಿತಾಂಶ ಅದಕ್ಕೆ ಪಾಠವಾಗಿದೆ. ಅವರು ಈಗ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಯಾದವ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.