ADVERTISEMENT

Delhi Elections | ದೆಹಲಿ ಅಭಿವೃದ್ಧಿಗಾಗಿ ಮತ ಚಲಾಯಿಸುವಂತೆ ಕೇಜ್ರಿವಾಲ್ ಮನವಿ

ಪಿಟಿಐ
Published 5 ಫೆಬ್ರುವರಿ 2025, 10:00 IST
Last Updated 5 ಫೆಬ್ರುವರಿ 2025, 10:00 IST
<div class="paragraphs"><p>ಮತಗಟ್ಟೆಗೆ ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಅರವಿಂದ ಕೇಜ್ರಿವಾಲ್</p></div>

ಮತಗಟ್ಟೆಗೆ ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಅರವಿಂದ ಕೇಜ್ರಿವಾಲ್

   

(ಪಿಟಿಐ ಚಿತ್ರ)

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತದಾನ ಬಿರುಸಿನಿಂದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮತದಾರರಿಗೆ ದೆಹಲಿ ಅಭಿವೃದ್ಧಿಗಾಗಿ ಮತ ಚಲಾಯಿಸುವಂತೆ ಮಾಜಿ ಮುಖ್ಯಮಂತ್ರಿ, ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಕರೆ ನೀಡಿದ್ದಾರೆ.

ADVERTISEMENT

ವೃದ್ಧ ತಂದೆ-ತಾಯಿ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಮತಗಟ್ಟೆಗೆ ಆಗಮಿಸಿದ ಕೇಜ್ರಿವಾಲ್, ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.

'ರಾಷ್ಟ್ರ ರಾಜಧಾನಿಯಲ್ಲಿ ಉತ್ತಮ ಶಾಲೆ, ಆಸ್ಪತ್ರೆ ಹಾಗೂ ಅಭಿವೃದ್ಧಿಗಾಗಿ ಮತ ಚಲಾಯಿಸಿ' ಎಂದು ಕೇಜ್ರಿವಾಲ್ ಮನವಿ ಮಾಡಿದ್ದಾರೆ.

'ಕೆಲಸ ಮಾಡುವವರಿಗೆ ಜನರು ಮತ ಹಾಕುವ ನಿರೀಕ್ಷೆಯಿದೆ' ಎಂದು ಅವರು ಹೇಳಿದರು.

ಸತತ ನಾಲ್ಕನೇ ಬಾರಿಗೆ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕೇಜ್ರಿವಾಲ್ ಅವರಿಗೆ ಬಿಜೆಪಿಯ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್‌ನ ಸಂದೀಪ್ ದೀಕ್ಷಿತ್ ಪೈಪೋಟಿ ಒಡ್ಡಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸುನಿತಾ ಕೇಜ್ರಿವಾಲ್, 'ಮತದಾರರು ಜಾಣರು. ಸರಿಯಾದ ಆಯ್ಕೆಯನ್ನು ಮಾಡುತ್ತಾರೆ. ದೆಹಲಿಯಲ್ಲಿ ಗೂಂಡಾಗಿರಿಯನ್ನು ಸಹಿಸುವುದಿಲ್ಲ' ಎಂದು ಹೇಳಿದ್ದಾರೆ.

ಸತತ ಮೂರನೇ ಬಾರಿಗೆ ಆಮ್ ಆದ್ಮಿ ಪಕ್ಷ (ಎಎಪಿ) ದೆಹಲಿಯಲ್ಲಿ ಗದ್ದುಗೆ ಏರುವ ನಿರೀಕ್ಷೆಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.