ಪ್ರಿಯಾಂಕಾ ಗಾಂಧಿ ವಾದ್ರಾ
-ಪಿಟಿಐ ಚಿತ್ರ
ವಯನಾಡ್: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನತ್ತ ಮುನ್ನಡೆದಿದೆ. 26 ವರ್ಷಗಳ ಬಳಿಕ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತಗೊಂಡಿದೆ.
ಈ ಕುರಿತು ಕೇರಳದ ವಯನಾಡ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, 'ರಾಷ್ಟ್ರ ರಾಜಧಾನಿಯ ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ' ಎಂದು ಹೇಳಿದ್ದಾರೆ.
'ದೆಹಲಿಯ ಜನರು ಬೇಸತ್ತು ಹೋಗಿದ್ದರು. ಅವರು ಬದಲಾವಣೆಯನ್ನು ಬಯಸಿದ್ದಾರೆ. ಗೆದ್ದವರಿಗೆಲ್ಲ ಅಭಿನಂದನೆಗಳು' ಎಂದು ತಿಳಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲೂ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದೆ. ಸತತ ಮೂರನೇ ಬಾರಿಯೂ ದೆಹಲಿ ಜನತೆಯ ಹೃದಯ ಗೆಲ್ಲುವಲ್ಲಿ ವಿಫಲವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕಾ, 'ನಾವು ಕಷ್ಟಪಟ್ಟು ಅವಿರತವಾಗಿ ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಲೇ ಇರಬೇಕು' ಎಂದು ಹೇಳಿದ್ದಾರೆ.
ಚುನಾವಣಾ ಆಯೋಗದ ಈಗಿನ ಟ್ರೆಂಡ್ (ಮಧ್ಯಾಹ್ನ 2.15) ಪ್ರಕಾರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 48 ಹಾಗೂ ಎಎಪಿ 22 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ಈ ಪೈಕಿ ಬಿಜೆಪಿ 11 ಹಾಗೂ ಎಎಪಿ 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.