ನವದೆಹಲಿ: ನಗರದಾದ್ಯಂತ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್ ನೀಡುವುದನ್ನು ಬಂಕ್‌ಗಳು ನಿಲ್ಲಿಸಲಿದೆ ಎಂದು ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಶನಿವಾರ ಪ್ರಕಟಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ವಾಹನಗಳ ಹೊರಸೂಸುವಿಕೆ ಮತ್ತು ಮಾಲಿನ್ಯವನ್ನು ತಡೆಯಲು ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಿರ್ಸಾ ಹೇಳಿದ್ದಾರೆ.
ಹಳೆಯ ವಾಹನಗಳ ಮೇಲೆ ನಿರ್ಬಂಧ, ಕಡ್ಡಾಯ ಹೊಗೆ ವಿರೋಧಿ ಕ್ರಮಗಳು ಮತ್ತು ಸಾರ್ವಜನಿಕ ಸಾರಿಗೆಗೆಗಳನ್ನು ವಿದ್ಯುತ್ ಚಾಲಿತವಾಗಿ ಪರಿವರ್ತಿಸುವುದು ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.
‘15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಗುರುತಿಸಲು ನಾವು ಪೆಟ್ರೋಲ್ ಪಂಪ್‌ಗಳಲ್ಲಿ ಗ್ಯಾಜೆಟ್‌ಗಳನ್ನು ಸ್ಥಾಪಿಸುತ್ತೇವೆ. 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಇಂಧನ ನೀಡಲಾಗುವುದಿಲ್ಲ’ ಎಂದು ಸಭೆಯ ನಂತರ ಸಿರ್ಸಾ ಹೇಳಿದ್ದಾರೆ.
ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಹಳೆಯ ವಾಹನಗಳಿಗೆ ಇಂಧನ ಪೂರೈಕೆಯನ್ನು ನಿರ್ಬಂಧಿಸುವುದರ ಜೊತೆಗೆ, ರಾಜಧಾನಿಯಲ್ಲಿರುವ ಎಲ್ಲಾ ಬಹುಮಹಡಿ ಕಟ್ಟಡಗಳು, ಹೋಟೆಲ್‌ಗಳು ಮತ್ತು ವಾಣಿಜ್ಯ ಸಂಕೀರ್ಣಗಳಲ್ಲಿ ವಾಯು ಮಾಲಿನ್ಯದ ಮಟ್ಟವನ್ನು ನಿಗ್ರಹಿಸಲು ಹೊಗೆ ನಿರೋಧಕಗಳನ್ನು ಅಳವಡಿಸಬೇಕು ಎಂದು ಸಿರ್ಸಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.