
ಪಿಟಿಐ
ನವದೆಹಲಿ: ತಮಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಮಾಜಿ ಶಾಸಕ, ಸಾಮಾಜಿಕ ಕಾರ್ಯಕರ್ತ ಜಿತೇಂದರ್ ಸಿಂಗ್ ಶಂಟಿ ಪೊಲೀಸರಿಗೆ ದೂರು ನೀಡಿದ್ದಾರೆ.
ಪದ್ಮ ಪ್ರಶಸ್ತಿ ಪಡೆದಿರುವ ಜಿತೇಂದರ್ ಸಿಂಗ್ ಶಂಟಿ ಅವರು ದೆಹಲಿ ಪೊಲೀಸರಿಗೆ ಪತ್ರ ಬರೆದು ದೂರು ನೀಡಿದ್ದಾರೆ.
ಭಗತ್ ಸಿಂಗ್ ಸೇವಾ ದಳದ ಅಧ್ಯಕ್ಷರಾಗಿರುವ ಅವರು, ಸೋಮವಾರ ತನಗೆ ವಾಟ್ಸ್ಆ್ಯಪ್ ಕರೆ ಬಂದಿತ್ತು. ಕರೆ ಮಾಡಿದವರು ಪಂಜಾಬಿ ಭಾಷೆಯಲ್ಲಿ ಮಾತನಾಡಿ ನನ್ನ ಮಗನ ಹೆಸರನ್ನು ಕೇಳಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಖಲಿಸ್ತಾನದ ವಿರುದ್ಧ ಮಾತನಾಡಿದ್ದಕ್ಕಾಗಿ ನನಗೆ, ನನ್ನ ಮಗನಿಗೆ ಜೀವ ಬೆದರಿಕೆ ಇದೆ. ನಮ್ಮ ಕುಟುಂಬಕ್ಕೆ ರಕ್ಷಣೆ ಕೊಡಬೇಕು ಎಂದು ಅವರು ವಿವೇಕ್ ವಿಹಾರ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.