ADVERTISEMENT

ಅಬಕಾರಿ ನೀತಿ ಪ್ರಕರಣ: ED ಸಮನ್ಸ್ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಲು ಬಂದ ಸಚಿವ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಮಾರ್ಚ್ 2024, 6:55 IST
Last Updated 30 ಮಾರ್ಚ್ 2024, 6:55 IST
<div class="paragraphs"><p>ದೆಹಲಿ ಸಾರಿಗೆ ಸಚಿವ ಕೈಲಾಶ್‌ ಗೆಹಲೋತ್‌</p></div>

ದೆಹಲಿ ಸಾರಿಗೆ ಸಚಿವ ಕೈಲಾಶ್‌ ಗೆಹಲೋತ್‌

   

ಪಿಟಿಐ ಚಿತ್ರ

ನವದೆಹಲಿ: ದೆಹಲಿ ಸಾರಿಗೆ ಸಚಿವ ಕೈಲಾಶ್‌ ಗೆಹಲೋತ್‌ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ಇ.ಡಿ) ಕಚೇರಿಗೆ ಬಂದಿದ್ದಾರೆ.

ADVERTISEMENT

ದೆಹಲಿ ಸರ್ಕಾರವು 'ಅಬಕಾರಿ ನೀತಿ' ಜಾರಿಗೆ ತಂದಿದ್ದ ಸಂದರ್ಭ ಹಣ ಅಕ್ರಮ ವರ್ಗಾವಣೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ವಿಚಾರಣೆಗೆ ಬರುವಂತೆ ಸಮನ್ಸ್‌ ನೀಡಿದ ಬೆನ್ನಲ್ಲೇ, ಗೆಹಲೋತ್‌ ಅವರು ಇ.ಡಿ ಕಚೇರಿ ತಲುಪಿದ್ದಾರೆ.

ಆಮ್‌ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರನ್ನು, ಇದೇ ಪ್ರಕರಣ ಸಂಬಂಧ ಇ.ಡಿ ಫೆಬ್ರುವರಿ 21ರಂದು ಬಂಧಿಸಿದೆ.

ವಿಚಾರಣೆಗೆ ಹಾಜರಾಗುವಂತೆ ಕಳುಹಿಸಿದ್ದ ಸಮನ್ಸ್‌ಗಳನ್ನು ಕೇಜ್ರಿವಾಲ್‌ ಪದೇ ಪದೇ ನಿರ್ಲಕ್ಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.