ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಸಂಜಯ್​ ಸಿಂಗ್ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ಪಿಟಿಐ
Published 2 ಡಿಸೆಂಬರ್ 2023, 10:27 IST
Last Updated 2 ಡಿಸೆಂಬರ್ 2023, 10:27 IST
<div class="paragraphs"><p>ಸಂಜಯ್‌ ಸಿಂಗ್‌</p></div>

ಸಂಜಯ್‌ ಸಿಂಗ್‌

   

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧಿಸಲಾಗಿರುವ ಎಎ‍ಪಿ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಇಂದು (ಶನಿವಾರ) ಚಾರ್ಜ್‌ಶೀಟ್‌ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಈಗಾಗಲೇ ಇಂಥ ಐದು ದೂರುಗಳನ್ನು ದಾಖಲಿಸಿದೆ.

ADVERTISEMENT

ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸಂಜಯ್‌ ಸಿಂಗ್‌ ಅವರನ್ನು ಇ.ಡಿ. ಅಧಿಕಾರಿಗಳು ಅ.4ರಂದು ಬಂಧಿಸಿದ್ದರು. ಬಳಿಕ ಹೆಚ್ಚಿನ ವಿಚಾರಣೆಗಾಗಿ ದೆಹಲಿಯ ನ್ಯಾಯಾಲಯ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿತ್ತು.

ಉದ್ಯಮಿ ದಿನೇಶ್‌ ಅರೋರಾ ಅವರಿಂದ ₹2 ಕೋಟಿ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಈ ಆರೋಪವನ್ನು ಸಂಜಯ್‌ ಸಿಂಗ್‌ ತಳ್ಳಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.