ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ದೆಹಲಿಯಲ್ಲಿ ಇ.ಡಿ ದಾಳಿ, ₹1 ಕೋಟಿ ನಗದು ವಶ

ಪಿಟಿಐ
Published 8 ಅಕ್ಟೋಬರ್ 2022, 14:00 IST
Last Updated 8 ಅಕ್ಟೋಬರ್ 2022, 14:00 IST
ಜಾರಿ ನಿರ್ದೇಶನಾಲಯ
ಜಾರಿ ನಿರ್ದೇಶನಾಲಯ   

ನವದೆಹಲಿ: ದೆಹಲಿ ಅಬಕಾರಿ ನೀತಿಯ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಮತ್ತು ಅವ್ಯವಹಾರ ಆರೋಪಗಳಿಗೆ ಸಂಬಂಧಿಸಿ 35 ಕಡೆಗಳಲ್ಲಿ ಶುಕ್ರವಾರ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯವು ದಾಳಿ ವೇಳೆ ₹1 ಕೋಟಿಗೂ ಹೆಚ್ಚು ನಗದು ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಮದ್ಯ ಉದ್ಯಮಿಗಳು, ಹಂಚಿಕೆದಾರ ಸಂಸ್ಥೆಗಳು ಮತ್ತು ಅವುಗಳಿಗೆ ಸಂಬಂಧಪಟ್ಟ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ.ದಾಳಿ ವೇಳೆ ಕೆಲ ಡಿಜಿಟಲ್‌ ಉಪಕರಣಗಳು ಮತ್ತು ದಾಖಲೆಗಳನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.

ದೆಹಲಿ ಮೂಲದ ಸುದ್ದಿ ವಾಹಿನಿ ಸಂಸ್ಥೆಯ ನಿರ್ದೇಶಕರಿಗೆ ಸೇರಿದ ಸ್ಥಳ, ಮದ್ಯ ರಫ್ತು ಮಾಡಿಕೊಳ್ಳುವ ಮತ್ತು ವಿತರಣೆ ಮಾಡುವ ಉದ್ಯಮಿ ಮತ್ತು ಪಂಜಾಬ್‌ನ ಮಾಜಿ ಶಾಸಕರಿಗೆ ಸೇರಿದ ಸ್ಥಳದಲ್ಲಿ ಶೋಧ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಈ ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೂ ಇ.ಡಿ 103 ದಾಳಿಗಳನ್ನು ನಡೆಸಿದೆ.ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.