ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ದೆಹಲಿ, ಪಂಜಾಬ್ ಸೇರಿ 35 ಕಡೆ ಇ.ಡಿ ದಾಳಿ

ಪಿಟಿಐ
Published 7 ಅಕ್ಟೋಬರ್ 2022, 6:57 IST
Last Updated 7 ಅಕ್ಟೋಬರ್ 2022, 6:57 IST
   

ನವದೆಹಲಿ:ದೆಹಲಿ ಸರ್ಕಾರವು ಇತ್ತೀಚೆಗೆ ಹಿಂಪಡೆದುಕೊಂಡಿದ್ದ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಯವು(ಇ.ಡಿ) ದೇಶದ ಹಲವೆಡೆ ದಾಳಿ ನಡೆಸಿದೆ.

ದೆಹಲಿ, ಪಂಜಾಬ್ ಮತ್ತು ಹೈದರಾಬಾದ್‌ ಸೇರಿದಂತೆ 35 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮದ್ಯ ಹಂಚಿಕೆದಾರರು, ಮದ್ಯ ಕಂಪನಿಗಳು ಮತ್ತು ಅವುಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೆಶನಾಲಯವು ಈವರೆಗೆ, 103 ಶೋಧ ಕಾರ್ಯಾಚರಣೆಗಳನ್ನು ನಡೆಸಿದೆ. ಇಂಡೋಸ್ಪಿರಿಟ್ ಎಂಬ ಮದ್ಯ ತಯಾರಿಕಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ(ಎಂ.ಡಿ) ಮತ್ತು ಉದ್ಯಮಿ ಸಮೀರ್ ಮಹಂದ್ರು ಎಂಬುವರನ್ನು ಬಂಧಿಸಲಾಗಿದೆ.

ADVERTISEMENT

ದೆಹಲಿ ಅಬಕಾರಿ ನೀತಿ 2021–22ರ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು ಮಾಡಿದ್ದರು. ಅಲ್ಲದೆ, ಕೆಲವು ಅಧಿಕಾರಿಗಳನ್ನೂ ಅವರು ಅಮಾನತು ಮಾಡಿದ್ದರು. ಈ ಸಂಬಂಧ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.